ಮಡಿಕೇರಿ:ಜಿಲ್ಲಾಸ್ಪತ್ರೆಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ ಶಾಸಕ ಡಾ.ಮಂತರ್ ಗೌಡ

ಮಡಿಕೇರಿ:ಜಿಲ್ಲಾಸ್ಪತ್ರೆಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ ಶಾಸಕ ಡಾ.ಮಂತರ್ ಗೌಡ

ಮಡಿಕೇರಿ: ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿರುವ ರೋಗಿಗಳಿಗೆ ಅನಾನುಕೂಲಗಳಾಗುತ್ತಿದೆ ಎಂಬ ಗಂಭೀರ ದೂರುಗಳು ಬಂದ ಹಿನ್ನೆಲೆಯಲ್ಲಿ ಇಂದು ಶಾಸಕ ಡಾ.ಮಂತರ್ ಗೌಡ ರವರು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ವೈದ್ಯಕೀಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದ್ದು ಚಿಕಿತ್ಸೆಗಾಗಿ ಆಸ್ಪತ್ರೆಗೆ ಬರುವ ರೋಗಿಗಳು ಹಾಗೂ ಸಂಬಂಧಿಸಿದವರೊಂದಿಗೆ ಗೌರವಯುತವಾಗಿ ನಡೆದುಕೊಳ್ಳಬೇಕು ಹಾಗೂ ಸೂಕ್ತ ರೀತಿಯಲ್ಲಿ ಸ್ಪಂದನೆ ನೀಡಬೇಕೆಂದು ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಸರ್ಜನ್ ನಂಜುಂಡಯ್ಯ,ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹಂಸ ಕೊಟ್ಟಮುಡಿ,ಕಾಂಗ್ರೆಸ್ ವಕ್ತಾರ ತೆನ್ನಿರ ಮೈನಾ,ನಗರ ಕಾಂಗ್ರೆಸ್ ಅಧ್ಯಕ್ಷ ಪ್ರಕಾಶ್ ಆಚಾರ್ಯ ಇದ್ದರು.