ಮಡಿಕೇರಿ : 2026-27ನೇ ಸಾಲಿನ ಮುಂಗಾರು ಬೆಳೆ ಸಮೀಕ್ಷೆ
admincoorgdaily

ಮಡಿಕೇರಿ ಸೆ.02:-ಕೊಡಗು ಜಿಲ್ಲೆಯಲ್ಲಿ ಒಟ್ಟು 525 ಹಳ್ಳಿಗಳಿದ್ದು, ಅದರಲ್ಲಿ ಒಟ್ಟು 2,60,798 ತಾಕುಗಳಲ್ಲಿ ಬೆಳೆ ಸಮೀಕ್ಷೆ ಕೈಗೊಳ್ಳಬೇಕಿದೆ.
ಸರ್ಕಾರದ ಆದೇಶದ ಅನುಸಾರ ಈ ಬಾರಿಯ ರೈತರ ಬೆಳೆ ಸಮೀಕ್ಷೆ ಕಾರ್ಯದಲ್ಲಿ ರೈತರು ಸ್ವತಃ ತಮ್ಮ ಜಮೀನಿನಲ್ಲಿ ತಾವು ಬೆಳೆದ ಬೆಳೆಯ ವಿವರ ದಾಖಲಿಸಲು ಅವಕಾಶ ಕಲ್ಪಿಸಲಾಗಿದೆ.
ಜಿಲ್ಲೆಯ ರೈತರು ತಮ್ಮ ಜಮೀನಿನಲ್ಲಿ ಬೆಳೆದ ಬೆಳೆ ವಿವರ ದಾಖಲಿಸಲು ಅವಶ್ಯವಿರುವ ಮೊಬೈಲ್ ಆಪ್ ಅನ್ನು ಗೂಗಲ್ --"https://play.google.com/store/apps/details?id= com.cak farmer23 24.cropsurvey ಡೌನ್‍ಲೋಡ್ ಮಾಡಿಕೊಳ್ಳಬಹುದಾಗಿದೆ.
ಮೊಬೈಲ್ ಆಪ್ ಬಳಕೆ ಮಾಡುವ ರೀತಿಯನ್ನು ರೈತರಿಗೆ ತಿಳಿಸಲು ಪ್ರತಿ ಗ್ರಾಮದಲ್ಲಿ ನುರಿತ ಖಾಸಗಿ ನಿವಾಸಿಗಳನ್ನು ನೇಮಿಸಲಾಗಿದ್ದು. ತಮ್ಮ ಗ್ರಾಮಗಳ ನಿಯೋಜಿಸಲ್ಪಟ್ಟ ಖಾಸಗಿ ನಿವಾಸಿಗಳ ವಿವರಗಳನ್ನು ಸಂಬಂಧಪಟ್ಟ ಕೃಷಿ/ ಕಂದಾಯ ಇಲಾಖೆಯ ಕಚೇರಿಯಿಂದ ಪಡೆಯಬಹುದಾಗಿದೆ.
ರೈತರು ಬೆಳೆ ಸಮೀಕ್ಷೆ ಮೊಬೈಲ್ ಆಪ್ ಅನ್ನು ಬಳಸಲು ಹೊಸ ರೈತರ ಸಮೀಕ್ಷೆ ಅಪ್ಲಿಕೇಷನ್ ಫ್ರೂಟ್ಸ್ ತಂತ್ರಾಂಶದ ಎಫ್‍ಐಡಿ ಸಂಖ್ಯೆಗೆ ಜೋಡಣೆಯಾಗಿರುವುದರಿಂದ ಅಪ್ಲಿಕೇಷನ್ ಬಳಸಲು ರೈತರು ಫ್ರೂಟ್ಸ್ ತಂತ್ರಾಂಶದ ಎಫ್‍ಐಡಿ ಸಂಖ್ಯೆ ಹೊಂದಿರುವುದು ಕಡ್ಡಾಯವಾಗಿರುತ್ತದೆ.
ಮೊದಲಿಗೆ ಗೂಗಲ್ ಪ್ಲೇ ಸ್ಟೋರ್‍ನಲ್ಲಿ https://play.google.com/store/apps/details?id= com.csk.farmer23 24 cropsurvey ಎಂದು ಹುಡುಕಿ ಡೌನ್‍ಲೋಡ್ ಮಾಡಿಕೊಳ್ಳುವುದು.
EKYC ಮೂಲಕ ಆಧಾರ್ ಧೃಡೀಕರಿಸಿ ಎಂದು ಕ್ಲಿಕ್ಕಿಸಿ ಆಧಾರ್ ಕಾರ್ಡ್ ಸಂಖ್ಯೆಯನ್ನು ನಮೂದಿಸಿ. Generate OTP ಎಂದು ಕ್ಲಿಕ್ಕಿಸಿ ನಂತರ ಬರುವ 6 ಅಂಕಿಯ ಒಟಿಪಿ ನಮೂದಿಸಿ. ನಂತರ ಮೊಬೈಲ್ ನಂಬರ್ ಅನ್ನು ನಮೂದಿಸಿ 4 ಅಂಕಿಯ ಒಟಿಪಿ ಪಡೆದುಕೊಂಡು ಅಪ್ಲಿಕೇಷನ್ ಸಕ್ರಿಯಗೊಳಿಸಲು OTP ನಮೂದಿಸಬೇಕು.
ರೈತರ ಆಧಾರ್ ಸಂಖ್ಯೆ ಮತ್ತು ಎಫ್‍ಐಡಿ ಸಂಖ್ಯೆಗೆ ಜೋಡಣೆಯಾದ ಎಲ್ಲಾ ಜಮೀನುಗಳ ಮಾಹಿತಿಗಳು ಡೌನ್‍ಲೋಡ್ ಆಗುತ್ತವೆ.
ಮುಂದಿನ ಹಂತದಲ್ಲಿ ರೈತರು ತಮ್ಮ ಜಮೀನಿನಲ್ಲಿ ಬೆಳೆದ ಬೆಳೆ ವಿವರವನ್ನು ದಾಖಲಿಸಬೇಕು. ಈ ಹಂತದಲ್ಲಿ ರೈತರು ತಮ್ಮ ಜಮೀನಿನಲ್ಲಿ ಪಾಳು ಬಿಟ್ಟಿರುವ ಪ್ರದೇಶ. ಕೃಷಿಯೇತರ ಬಳಕೆಗೆ (ಕೊಟ್ಟಿಗೆ. ಕೃಷಿ ಹೊಂಡ. ಮನೆ ಇತರೆ) ಬಳಕೆಯಾದ ಪ್ರದೇಶದ ವಿವರವನ್ನು ಸಹ ದಾಖಲಿಸಬೇಕಿದೆ.
ರೈತರು ತಾವು ಬೆಳೆದ ಬೆಳೆಯ ಗಿಡದ ಸಂಖ್ಯೆ ಮತ್ತು ಪ್ರತಿ ಗಿಡ ಅಂತರ ನಮೂದಿಸಬೇಕು. ರೈತರು ತಾವು ಬೆಳೆದ ಪ್ರತಿ ಬೆಳೆಯ ವಿಸ್ತೀರ್ಣದ ಜೊತೆಗೆ ಪ್ರತಿ ಬೆಳೆಯ 2 ಛಾಯಾ ಚಿತ್ರಗಳನ್ನು ತೆಗೆದು ಅಪ್ಲೋಡ್ ಮಾಡಬೇಕು. ಹೀಗೆ ಅಪ್ಲೋಡ್ ಮಾಡಲಾದ ಮಾಹಿತಿಯನ್ನು ಪ್ರತಿ ಗ್ರಾಮಕ್ಕೆ ನೇಮಿಸಲಾದ ಸರ್ಕಾರಿ ಅಧಿಕಾರಿಗಳು (ಮೇಲ್ವಿಚಾರಕರು) ಪರಿಶೀಲಿಸಿ ಅನುಮೋದಿಸುತ್ತಾರೆ.
ರೈತರು ಎಫ್‍ಐಡಿ ಸಂಖ್ಯೆ ಹೊಂದಿಲ್ಲದಿದ್ದಲ್ಲಿ ರೈತ ಸಂಪರ್ಕ ಕೇಂದ್ರ. ಗ್ರಾಮ ಒನ್ ಕೇಂದ್ರ. ತೋಟಗಾರಿಕೆ ಇಲಾಖೆ ಅಥವಾ ಕಂದಾಯ ಇಲಾಖೆ ಸಂಪರ್ಕಿಸಿ ಎಫ್‍ಐಡಿ ಸಂಖ್ಯೆ ಮಾಡಿಸಿಕೊಳ್ಳಬಹುದು. ಎಫ್‍ಐಡಿ ಸಂಖ್ಯೆಗೆ ಯಾವುದಾದರೂ ಜಮೀನು ಸೇರ್ಪಡೆ ಆಗದೇ ಇದ್ದಲ್ಲಿ ಸೇರಿಸಿಕೊಳ್ಳಲು ಇದೇ ಮೊಬೈಲ್ ಆಫ್‍ನಲ್ಲಿ ಅವಕಾಶ ಕಲ್ಪಿಸಲಾಗಿದೆ.
ಒಂದು ವೇಳೆ ರೈತರು ತಮ್ಮ ಜಮೀನಿನ ಬೆಳೆ ವಿವರಗಳನ್ನು ನಿಗಧಿತ ಸಮಯದೊಳಗೆ ಆಪ್ ಲೋಡ್ ಮಾಡದಿದ್ದಲ್ಲಿ ಇಲಾಖೆಯಿಂದ ನೇಮಿಸಲಾದ ಖಾಸಗಿ ನಿವಾಸಿಗಳ ಮೂಲಕ ಸಮೀಕ್ಷೆ ಕಾರ್ಯಕೈಗೊಳ್ಳಲಾಗುವುದು. ಹೀಗೆ ಸಂಗ್ರಹಿಸಲಾದ ರೈತರ ಬೆಳೆ ಸಮೀಕ್ಷೆ ಮಾಹಿತಿಯನ್ನು ಸರ್ಕಾರದ ಯೋಜನೆಗಳಿಗೆ ಬಳಸಲಾಗುತ್ತದೆ.
ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಅರ್ಹ ಫಲಾನುಭವಿಗಳನ್ನು ಗುರುತಿಸಲು. ಬೆಳೆ ವಿಮಾ ಯೋಜನೆಯಡಿ ಬೆಳೆ ವಿವರ ಪರಿಶೀಲಿಸಲು. ಸಾಂಖ್ಯಿಕ ಇಲಾಖೆ, ಕೃಷಿ, ತೋಟಗಾರಿಕೆ ಮತ್ತು ರೇμÉ್ಮ ಇಲಾಖೆಗಳ ಬೆಳೆ ವಿಸ್ತೀರ್ಣ ವರದಿ ಕಾರ್ಯದಲ್ಲಿ. ಬೆಳೆ ಕಟಾವು ಪ್ರಯೋಗಗಳನ್ನು ಕೈಗೊಳ್ಳಲು. ಬೆಳೆ ಮಾನದಂಡಗಳಿಗೆ ಅನುಗುಣವಾಗಿ ಕೃಷಿ, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಗಳ ಫಲಾನುಭವಿ ಆಧಾರಿತ ಯೋಜನೆಗಳ ಅನುಷ್ಠಾನಕ್ಕೆ. ಪಹಣಿಯಲ್ಲಿ ಬೆಳೆ ವಿವರ ದಾಖಲಿಸಲು. ಬ್ಯಾಂಕ್ ಮತ್ತು ವ್ಯವಸಾಯ ಸೇವಾ ಸಹಕಾರಿ ಸಂಘಗಳ ಮುಖಾಂತರ ಬೆಳೆ ಸಾಲ ನೀಡುವ ಸಂದರ್ಭದಲ್ಲಿ ಬೆಳೆ ಪರಿಶೀಲನೆ ಮಾಡಲು.
ಕೆಲವೊಂದು ಸಂದರ್ಭಗಳಲ್ಲಿ ಖಾಸಗಿ ನಿವಾಸಿಗಳು ತಲುಪಲು ಸಾಧ್ಯವಾಗದ ಪ್ರದೇಶಗಳಲ್ಲಿರುವ ಬೆಳೆಗಳು ಅವರು ದಾಖಲಿಸುವ ಬೆಳೆ ಸಮೀಕ್ಷೆಯಿಂದ ಹೊರಗುಳಿಯುವ ಸಾಧ್ಯತೆಗಳಿರುತ್ತದೆ. ಆದ್ದರಿಂದ ಈ ಅಂಶಗಳನ್ನು ಗಮನದಲ್ಲಿ ಇರಿಸಿಕೊಂಡು ಜಿಲ್ಲೆಯ ರೈತರು ಈ ಅವಕಾಶದ ಸದುಪಯೋಗ ಪಡೆದುಕೊಂಡು ತಮ್ಮ ಜಮೀನಿನಲ್ಲಿ ಬೆಳೆದ ಬೆಳೆ ವಿವರವನ್ನು ತಾವೇ ಸರ್ಕಾರಕ್ಕೆ ನಿಗದಿತ ಸಮಯದೊಳಗೆ ವರದಿ ಮಾಡಲು" ಈ ಮೂಲಕ ಕೋರಲಾಗಿದೆ.
ಹೆಚ್ಚಿನ ಮಾಹಿತಿಗೆ ತಮ್ಮ ಗ್ರಾಮದ ಖಾಸಗಿ ನಿವಾಸಿಯನ್ನು ಅಥವಾ ಸಮೀಪದ ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳನ್ನು ತಮ್ಮ ಗ್ರಾಮದ ಗ್ರಾಮ ಲೆಕ್ಕಿಗರನ್ನು ಅಥವಾ ನಾಡ ಕಚೇರಿ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗಳನ್ನು ಸಂಪರ್ಕಿಸಬಹುದು ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಚಂದ್ರಶೇಖರ್ ಅವರು ತಿಳಿಸಿದ್ದಾರೆ.