Kodagu

ಹಾಕಿ ಪಂದ್ಯಾವಳಿಯಲ್ಲಿ ಮಡಿಕೇರಿ ಪಿ.ಎಂ.ಶ್ರೀ ಶಾಲಾ ವಿದ್ಯಾರ್ಥಿಗಳು ರಾಷ್ಟ್ರ ಮಟ್ಟಕ್ಕೆ ಆಯ್ಕೆ

admincoorgdaily

ಮಡಿಕೇರಿ:21-11-25 ರಿಂದ 23-11-25ರವರೆಗೆ ಹಾಸನದಲ್ಲಿ ನಡೆದ 14 ವಯೋಮಿತಿಯ ಬಾಲಕಿಯರ ರಾಜ್ಯ ಮಟ್ಟದ ಹಾಕಿ ಪಂದ್ಯಾವಳಿಯಲ್ಲಿ ಪಿ.ಎಂ.ಶ್ರೀ ಸರಕಾರಿ ಮಾದರಿ ಪ್ರಾಥಮಿಕ ಶಾಲೆ ಮಡಿಕೇರಿಯ ವಿದ್ಯಾರ್ಥಿಗಳು ಮೈಸೂರು ವಿಭಾಗದ ತಂಡದ ಪರ ಆಟವಾಡಿ ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನಗಳಿಸಿದ್ದಾರೆ.

ಕುಮಾರಿ ತಸ್ವಿಕ ತಂಗಮ್ಮ.ಎ.ಕೆ 7ನೇ ತರಗತಿ ಮತ್ತು ಜಿಯಾಶ್ರೀ.ಎನ್ 8ನೇ ತರಗತಿ ಇವರುಗಳು ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ನಡೆಯುವ ರಾಷ್ಟ್ರ ಮಟ್ಟದ ಹಾಕಿ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ. ಇವರುಗಳಿಗೆ ಶಾಲಾ ಮುಖ್ಯೋಪಾಧ್ಯಾಯರಾದ ಭವಾನಿ.ಹೆಚ್.ಟಿ ದೈ.ಶಿ.ಶಿಕ್ಷಕರಾದ ಸಂದೇಶ್.ಬಿ.ಎಲ್ ಶಾಲಾ ಶಿಕ್ಷಕ ವೃಂದ, ಎಸ್.ಡಿ.ಎಂ.ಸಿ ಅಧ್ಯಕ್ಷರು ಮತ್ತು ಸದಸ್ಯರುಗಳು ಅಭಿನಂದನೆ ಸಲ್ಲಿಸಿದ್ದಾರೆ.