ಮಡಿಕೇರಿ;ಜಿಲ್ಲಾಸ್ಪತ್ರೆಯಲ್ಲಿ ತುರ್ತು ರೋಗಿಗಳ ಚಿಕಿತ್ಸೆಗೆ ಕ್ರಮದ ಭರವಸೆ
admincoorgdaily

ಮಡಿಕೇರಿ; ಜಿಲ್ಲಾಸ್ಪತ್ರೆಯಲ್ಲಿ ತುರ್ತುಸ್ಥಿತಿ ಎದುರಿಸುವ ರೋಗಿಗಳ ಚಿಕಿತ್ಸೆಗೆ ಆದ್ಯತೆ ನೀಡಲು ಕ್ರಮ ವಹಿಸುವುದಾಗಿ ಜಿಲ್ಲಾ ಸರ್ಜನ್ ಭರವಸೆಯಿತ್ತಿದ್ದಾರೆ.
ಕೊಡಗು ಜಿಲ್ಲಾ ಸೋಶಿಯಲ್ ಡೆಮಾಕ್ರಟಿಕ್ ಟ್ರೇಡ್ ಯೂನಿಯನ್ ವತಿಯಿಂದ ಬುಧವಾರದಂದು ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಸರ್ಜನ್ ರವರನ್ನು ಕಚೇರಿಯಲ್ಲಿ ಭೇಟಿಯಾಗಿ ಜಿಲ್ಲಾಸ್ಪತ್ರೆಗೆ ಆಗಮಿಸುವ ತುರ್ತು ಚಿಕಿತ್ಸೆ ಬೇಕಾಗುವ ರೋಗಿಗಳು ಹಾಗೂ ಸಂಬಂಧಿಕರಿಗೆ ಸರತಿ ಸಾಲಿನಲ್ಲಿ ನಿಂತು ಚಿಕಿತ್ಸೆಗೆ ಬೇಕಾದ ದಾಖಲಾತಿಗಳನ್ನು ನೀಡಲು ತೊಂದರೆಯಾಗುವ ಕಾರಣದಿಂದ ಸಮಸ್ಯೆ ಉಂಟಾಗುತ್ತಿರುವುದನ್ನು ಮನದಟ್ಟು ಮಾಡಿ ಕೊಡಲಾಯಿತು ಅಲ್ಲದೇ ಕಾರ್ಮಿಕರ ಹಾಗೂ ನಾಗರಿಕರ ಪರವಾಗಿ ಮನವಿ ಸಲ್ಲಿಸಲಾಯಿತು.
ಇದಕ್ಕೆ ಸ್ಪಂದಿಸಿದ ಜಿಲ್ಲಾ ಸರ್ಜನ್ ರವರು ತುರ್ತು ರೋಗಿಗಳಿಗೆ ದಾಖಲಾತಿಯ ವಿಷಯದಲ್ಲಿ ವಿನಾಯಿತಿ ನೀಡಿ ಚಿಕಿತ್ಸೆಗೆ ಆದ್ಯತೆ ಕೊಡುವುದಾಗಿ ಭರವಸೆ ನೀಡಿದರು.
ನಿಯೋಗದಲ್ಲಿ ಕೊಡಗು ಜಿಲ್ಲಾ ಸೋಶಿಯಲ್ ಡೆಮಾಕ್ರಟಿಕ್ ಟ್ರೇಡ್ ಯೂನಿಯನ್ ಜಿಲ್ಲಾಧ್ಯಕ್ಷರಾದ ಅಣ್ಣಾ ಶರೀಫ್, ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಜಾಕ್ ಎಂಎ. ಸದಸ್ಯರಾದ ಹಸೀನಾ, ಸಾಮಾಜಿಕ ಕಾರ್ಯಕರ್ತರಾದ ಸಾಜಿದ್ ಹಾಗೂ ಸದಸ್ಯರು ಹಾಜರಿದ್ದರು.