ಮಡಿಕೇರಿ: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: 20 ವರ್ಷ ಕಠಿಣ ಸಜೆ
ಮಡಿಕೇರಿ: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ ಮಡಿಕೇರಿಯ ಮೂರನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ 20 ವರ್ಷ ಕಠಿಣ ಸಜೆ ವಿಧಿಸಿ ತೀರ್ಪು ನೀಡಿದೆ. ವಿಚಾರಣೆ ನಡೆಸಿದ ಮೂರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಜಿ.ಎಲ್. ಸುರೇಂದ್ರ ಅವರು ಆರೋಪಿ ಸಾಬೀತಾದ ಹಿನ್ನೆಲೆಯಲ್ಲಿ ಶಿಕ್ಷೆ ವಿಧಿಸಿದ್ದಾರೆ.
ಘಟನೆ ಹಿನ್ನೆಲೆ : 2021 ರ ಡಿಸೆಂಬರ್ ತಿಂಗಳಲ್ಲಿ ಒಂದು ದಿನ ಮತ್ತು ದಿನಾಂಕ 22 2 2022 ರಂದು ವಿರಾಜಪೇಟೆ ತಾಲೂಕಿನ ಕಾಫಿ ಎಸ್ಟೇಟ್ ನ ಲೈನ್ ಮನೆಯಲ್ಲಿ ವಾಸವಿದ್ದ ಮೂಲತಃ ವಶ್ಚಿಮ ಬಂಗಾಳದ, 16 ವರ್ಷ 2 ತಿಂಗಳ ಪ್ರಾಯದ ಹುಟ್ಟಿನಿಂದಲೂ ಮಾತನಾಡಲು ಬಾರದ ಮತ್ತು ಕಿವಿ ಕೇಳದ ನೊಂದಬಾಲಕಿಗೆ, ಅಲ್ಲಿಯೇ ಪಕ್ಕದ ಲೈನ್ ಮನೆಯಲ್ಲಿ ವಾಸವಿದ್ದ ಆರೋಪಿಯು ಮಧ್ಯಾಹ್ನ 3.30ರ ಸಮಯದಲ್ಲಿ ತನ್ನ ಲೈನ್ ಮನೆಗೆ ಕರೆದುಕೊಂಡು ಹೋಗಿ ಅತ್ಯಾಚಾರ ವೆಸಗಿ ಆಕೆಯನ್ನು ಗರ್ಭಿಣಿ ಮಾಡಿದ ಎಂದು ನೊಂದಬಾಲಕಿಯ ತಾಯಿ ನೀಡಿದ ದೂರಿನ ಸಂಬಂಧ ಮಡಿಕೇರಿಯ ಕೊಡಗು ಮಹಿಳಾ ಪೊಲೀಸ್ ಠಾಣೆಯಲ್ಲಿ ಪೊಲೀಸ್ ಉಪ ನಿರೀಕ್ಷಕರಾದ ಕೆ.ಬಿ ಅಚ್ಚಮ್ಮ ಪ್ರಕರಣ ದಾಖಲಿಸಿಕೊಂಡಿದ್ದರು.
ಪ್ರಕರಣದ ತನಿಖೆಯನ್ನು ಕೊಡಗು ಮಹಿಳಾ ಪೊಲೀಸ್ ಠಾಣೆಯ ಪೊಲೀನ್ ನಿರೀಕ್ಷಕರಾದ ರವಿ ಕಿರಣ್ ಎಸ. ಎಸ ಮತ್ತು ಮುದ್ದು ಮಾದೇವ ಎಂ ಇವರು ನಡೆಸಿ ಆರೋಪಿಯ ವಿರುದ್ಧ ಭಾರತೀಯ ದಂಡ ಸಂಹಿತೆ ಮತ್ತು ಪೋಷ್ಟೋ ಕಾಯ್ದೆ ಅಡಿಯ ಅಪರಾಧಕ್ಕಾಗಿ ದೋಷಾರೋಪಣ ಪತ್ರವನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.
ಮೂರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಗೌ|| ಸುರೇಂದ್ರ ಜಿ ಇವರು ವಿಚಾರಣೆ ಕೈಗೊಂಡು ಆರೋಪ ಸಾಬೀತಾದ ಹಿನ್ನೆಲೆ ಆರೋಪಿಗೆ ಶಿಕ್ಷೆ ವಿಧಿಸಿದ್ದಾರೆ. ಲೈಂಗಿಕ ಅತ್ಯಾಚಾರ ಅಪರಾಧಕ್ಕೆ ಪೋಷ್ಟೋ ಕಾಯ್ದೆ ಅಡಿಯಲ್ಲಿ 20 ವರ್ಷ ಕಠಿಣ ಸಜೆ ಮತ್ತು Rs.20,000/- ದಂಡ , ನೊಂದಬಾಲಕಿಗೆ ನಾಲ್ಕು ಲಕ್ಷ ಪರಿಹಾರ ನೀಡಬೇಕೆಂದು ತೀರ್ಪು ನೀಡಿ ಆದೇಶಿಸಿದ್ದಾರೆ. ಸರಕಾರದ ಪರ ವಿಶೇಷ ಅಭಿಯೋಜಕರಾದ ಬಿ ಎಸ ರುದ್ರ ಪ್ರಸನ್ನ ವಾದ ಮಂಡಿಸಿರುತ್ತಾರೆ.
What's Your Reaction?
Like
2
Dislike
1
Love
0
Funny
0
Angry
0
Sad
2
Wow
1

