ಮಡಿಕೇರಿ ತಾಲ್ಲೂಕು ಬಂಟರ ಸಂಘದ ವತಿಯಿಂದ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ:ಅರ್ಜಿ ಸಲ್ಲಿಸಲು ಜುಲೈ30 ಕೊನೆಯ ದಿನ

ಮಡಿಕೇರಿ: ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸುವ ಕಾರ್ಯಕ್ರಮವನ್ನು ಮಡಿಕೇರಿ ತಾಲೂಕು ಬಂಟರ ಸಂಘದ ವತಿಯಿಂದ ಹಮ್ಮಿಕೊಂಡಿದ್ದು, ಸಮುದಾಯದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು ಎಂದು ತಾಲೂಕು ಬಂಟರ ಸಂಘದ ಕಾರ್ಯದರ್ಶಿ ಚಂದ್ರಶೇಖರ್ ರೈ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅರ್ಜಿ ಸಲ್ಲಿಸಲು ಜು.30 ಕೊನೆ ದಿನವಾಗಿದೆ. ವಿದ್ಯಾರ್ಥಿಗಳು ಪೋಷಕರ ಆಧಾರ್ ಕಾರ್ಡ್ ನಕಲು, ವಿದ್ಯಾರ್ಥಿಯ ಭಾವಚಿತ್ರ, ಅಂಕಪಟ್ಟಿಯ ನಕಲು, ನಮೂದಿಸಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ವಿವರಗಳಿಗೆ 9480290688, 7829768736 ಸಂಪರ್ಕಿಸಬಹುದು ಎಂದು ತಿಳಿಸಿದರು.
ಈ ಹಿಂದೆ ಕೊಡಗು ಜಿಲ್ಲಾಬಂಟರ ಸಂಘದ ವತಿಯಿಂದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುತ್ತಿತ್ತು. ಮುಂದಿನ ದಿನಗಳಲ್ಲಿ ಮಡಿಕೇರಿ ತಾಲೂಕು ಬಂಟರ ಸಂಘದ ವತಿಯಿಂದ ಪ್ರತಿ ವರ್ಷ ನೀಡಲಾಗುತ್ತದೆ. 2023-24 ಮತ್ತು 2024-25ನೇ ಸಾಲಿನ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಯಲ್ಲಿ ಶೇ.90 ಮತ್ತು ಅದಕ್ಕಿಂತ ಮೇಲ್ಪಟ್ಟು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಗುವುದು. ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು ಎಂದು ಮಾಹಿತಿ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಮಡಿಕೇರಿ ತಾಲೂಕು ಬಂಟರ ಸಂಘದ ಅಧ್ಯಕ್ಷ ಸದಾಶಿವ ರೈ, ಖಜಾಂಚಿ ದಿವೇಶ್ ರೈ, ಮಡಿಕೇರಿ ತಾಲೂಕಿನ ಮಹಿಳಾ ಘಟಕ ಅಧ್ಯಕ್ಷೆ ಶಶಿ ಲೋಕೇಶ್ ರೈ, ಪ್ರಮುಖರಾದ ಬಿ.ಸಿ.ಹರೀಶ್ ರೈ, ವಿಜಯಲಕ್ಷ್ಮಿ, ಉಪಸ್ಥಿತರಿದ್ದರು.
What's Your Reaction?






