ಮೇ 20ರಂದು ಕಡಂಗದಲ್ಲಿ ಮಡಿಕೇರಿ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನ

May 16, 2026 - 16:25
 0  87
ಮೇ 20ರಂದು ಕಡಂಗದಲ್ಲಿ ಮಡಿಕೇರಿ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನ

ಮಡಿಕೇರಿ:12ನೇ ಮಡಿಕೇರಿ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಮೇ 20ರಂದು ಕಡಂಗ ಸರ್ಕಾರಿ ಶಾಲಾ ಮೈದಾನದಲ್ಲಿ ನಡೆಯಲಿದೆ. ಹಿರಿಯ ಸಾಹಿತಿ ಐತಿಚಂಡ ರಮೇಶ್ ಉತ್ತಪ್ಪ ಸಮ್ಮೇಳನಾಧ್ಯಕ್ಷರಾಗಿದ್ದು, ಶಾಸಕ ಎ.ಎಸ್.ಪೊನ್ನಣ್ಣ ಮಾರ್ಗದರ್ಶನದಲ್ಲಿ ಸಿದ್ಧತೆ ಪೂರ್ಣಗೊಂಡಿದೆ ಎಂದು ಕಸಾಪ ಮಾಜಿ ಜಿಲ್ಲಾಧ್ಯಕ್ಷ ಟಿ.ಪಿ.ರಮೇಶ್ ತಿಳಿಸಿದ್ದಾರೆ.

ಬೆಳಗ್ಗೆ 8ಕ್ಕೆ ಧ್ವಜಾರೋಹಣ, 9ಕ್ಕೆ ಮೆರವಣಿಗೆ ನಡೆಯಲಿದೆ. ಶಾಸಕ ಪೊನ್ನಣ್ಣ ಉದ್ಘಾಟಿಸಲಿದ್ದು, ಶಾಸಕ ಮಂತರ್ ಗೌಡ ಸ್ಮರಣ ಸಂಚಿಕೆ, ಸಚಿವ ಭೋಸರಾಜ್ ಪುಸ್ತಕ ಬಿಡುಗಡೆಗೊಳಿಸಲಿದ್ದಾರೆ. ಸಂಸದ ಯದುವೀರ್ ಒಡೆಯರ್, ಎಂಎಲ್ಸಿ ಸುಜಾ ಕುಶಾಲಪ್ಪ ಸೇರಿದಂತೆ ಗಣ್ಯರು ಭಾಗವಹಿಸಲಿದ್ದಾರೆ. ಗೀತಗಾಯನ, ವಿಚಾರಗೋಷ್ಠಿ, ಕವಿಗೋಷ್ಠಿ, ಸಾಧಕರಿಗೆ ಸನ್ಮಾನ, ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಪ್ರಮುಖರಾದ ಕಡ್ಲೆರ ತುಳಸಿ ಮೋಹನ್, ಕೌಶಿ ಕಾವೇರಮ್ಮ, ಲಕ್ಷು ಸೋಮಣ್ಣ, ಅಚ್ಚಾಂಡಿರ ತಾರಾ ಉದಯ ಹಾಜರಿದ್ದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0