ಮಡಿಕೇರಿ: ವಿಶ್ವ ವಿಶೇಷ ಚೇತನರ ದಿನಾಚರಣೆಯ ಪ್ರಯುಕ್ತ ವಿವಿಧ ಆಟೋಟ ಸ್ಪರ್ಧೆ
ದಮಡಿಕೇರಿ:ಗಾಂಧಿ ಮೈದಾನದಲ್ಲಿ ಜಿಲ್ಲಾ ವಿಶೇಷ ಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಮತ್ತು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಮಡಿಕೇರಿ ಹಾಗೂ ಸ್ವಾಮಿ ವಿವೇಕಾನಂದ ಯೂತ್ ಮೂಮೆಂಟ್ ಕೊಡಗು & ಅಪರ್ಚುನಿಟಿ ಶಾಲೆ ಮಡಿಕೇರಿ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ವಿಶೇಷ ಚೇತನರ ದಿನಾಚರಣೆ ಅಂಗವಾಗಿ ಸಾಂಸ್ಕೃತಿಕ ಮತ್ತು ಆಟೋಟ ಸ್ಪರ್ಧೆ ನಡೆಯಿತು.
ಕಾರ್ಯಕ್ರಮವನ್ನು ಸ್ವಾಮಿ ವಿವೇಕಾನಂದ ಯೂತ್ ಮೋಮೆಂಟ್ ನ ಸಲಹಾ ಸಮಿತಿ ಸದಸ್ಯರಾದ ಅಜಯ್ ಶೂದ್ ಅವರು ಗಿಡಕ್ಕೆ ನೀರು ಹಾಕುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಡಿಕೇರಿ ತಾಲೂಕು ಸ್ತ್ರೀ ಶಕ್ತಿ ಸಂಘದ ಖಜಾಂಜಿಗಳಾದ ಅನಿತಾ ರವರು ಹಾಗೂ ಜಿಲ್ಲಾ ವಿಶೇಷ ಚೇತನರ ಸಂಘದ ಅಧ್ಯಕ್ಷರಾದ ಮಹೇಶ್ವರ್ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಧಿಕಾರಿಗಳಾದ ಸೀತಾ ಲಕ್ಷ್ಮಿ ರವರು ಮತ್ತು ವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷರಾದ ಶ್ರೀ ತಿರುಮಲೇಶ್ರವರು ಕಾರ್ಯಕ್ರಮದಲ್ಲಿ ಹಾಜರಿದ್ದರು. ಕಾರ್ಯಕ್ರಮದ ನಿರೂಪಣೆಯನ್ನು ಸಿಡಿಪಿಓ ಶ್ರೀಮತಿ ಸೀತಾ ಲಕ್ಷ್ಮಿ ರವರು ಸ್ವಾಗತ ಭಾಷಣವನ್ನು ಮತ್ತು ವಂದನಾರ್ಪಣೆಯನ್ನು ಸ್ವಾಮಿ ವಿವೇಕಾನಂದ ಯೂಥ್ ಮುಮೆಂಟ್ ಬೋರಪ್ಪನವರು ನಡೆಸಿಕೊಟ್ಟರು.
ಕೊನೆಯಲ್ಲಿ ಭಾಗವಹಿಸಿದ ಎಲ್ಲ ಮಕ್ಕಳಿಗೂ ಶ್ರೀ ಶಕ್ತಿ ಸಂಘದ ವತಿಯಿಂದ ಬಹುಮಾನವನ್ನು Productivity ಜವಾಬ್ದಾರಿಯನ್ನು ಸೀತಾ ಲಕ್ಷ್ಮಿ ಸಿಡಿಪಿಓ ಮಡಿಕೇರಿ ಹಾಗೂ ರಾಜೇಶ್ ರವರು ವಹಿಸಿ ಕಾರ್ಯಕ್ರಮವನ್ನು ಯಶಸ್ವಿಯಾಗಿ ನೆರವೇರಿಸಿ ಕೊಟ್ಟರು