ಮಡಿಕೇರಿ ವಿಶ್ವಕರ್ಮ ಸಮಾಜ ಸೇವಾ ಸಂಘದಿಂದ ಶ್ರದ್ಧಾಭಕ್ತಿಯ ಋಗುಪಾಕರ್ಮ ಆಚರಣೆ

Aug 27, 2026 - 19:09
 0  31
ಮಡಿಕೇರಿ ವಿಶ್ವಕರ್ಮ ಸಮಾಜ ಸೇವಾ ಸಂಘದಿಂದ ಶ್ರದ್ಧಾಭಕ್ತಿಯ ಋಗುಪಾಕರ್ಮ ಆಚರಣೆ

ಮಡಿಕೇರಿ ಆ.27: ಕೊಡಗು ಜಿಲ್ಲಾ ವಿಶ್ವಕರ್ಮ ಸಮಾಜ ಸೇವಾ ಸಂಘ ಮಡಿಕೇರಿ ವತಿಯಿಂದ ಶ್ರಾವಣ ಮಾಸದ ಅಂಗವಾಗಿ ಋಗುಪಾಕರ್ಮ ಹೋಮ ಹಾಗೂ ಯಜ್ಞೋಪವೀತಧಾರಣ ವಿಧಿಯನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು.

ನಗರದ ವಿಶ್ವಕರ್ಮ ಸಮಾಜ ಸೇವಾ ಸಂಘದ ಭವನದಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮವನ್ನು ಮಂಗಳೂರಿನ ಪುರೋಹಿತ್ ಸತೀಶ್ ಆಚಾರ್ಯ ಅವರ ಪೌರೋಹಿತ್ಯದಲ್ಲಿ ನೆರವೇರಿಸಲಾಯಿತು.

ಋಗುಪಾಕರ್ಮ ಹೋಮ ಹಾಗೂ ಯಜ್ಞೋಪವೀತಧಾರಣ ವಿಧಿಗಳು ಸಾಂಪ್ರದಾಯಿಕ ಆಚರಣೆಗಳೊಂದಿಗೆ ಭಕ್ತಿಪೂರ್ವಕವಾಗಿ ಜರುಗಿದವು. ಸಂಘದ ಅಧ್ಯಕ್ಷ ಜಗದೀಶ್ ಆಚಾರ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂಘದ ಸರ್ವ ಸದಸ್ಯರು ಹಾಗೂ ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಧಾರ್ಮಿಕ ವಿಧಿವಿಧಾನಗಳಲ್ಲಿ ಪಾಲ್ಗೊಂಡರು. ಸಮಾಜದ ಪರಂಪರೆ, ಸಂಸ್ಕೃತಿ ಹಾಗೂ ಧಾರ್ಮಿಕ ಆಚರಣೆಗಳನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮಗಳು ಮಹತ್ವದ್ದಾಗಿದೆ ಎಂದು ಸಂಘದ ಪದಾಧಿಕಾರಿಗಳು ತಿಳಿಸಿದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0