ಮಡಿಕೇರಿ:ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯ ನೂತನ ಕಟ್ಟಡ ಕಾಮಗಾರಿಗೆ ಚಾಲನೆ ನೀಡಿದ ಶಾಸಕ ಡಾ.ಮಂತರ್ ಗೌಡ
ಮಡಿಕೇರಿ:ಜಿಲ್ಲಾಡಳಿತ, ಜಿಲ್ಲಾಪಂಚಾಯತ್ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಕೊಡಗು ಜಿಲ್ಲೆ ರವರ ಸಂಯುಕ್ತ ಆಶ್ರಯದಲ್ಲಿ ಶಾಸಕರು, ಮಡಿಕೇರಿ ವಿಧಾನಸಭಾ ಕ್ಷೇತ್ರ ರವರು ಮಡಿಕೇರಿ ನಗರದಲ್ಲಿ ಮಂಜೂರಾಗಿರುವ ರೂ.379.00 ಲಕ್ಷ ಮೊತ್ತದ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿನಿಲಯ (ಸ್ಥಳ-ಐ.ಟಿ.ಐ ಕಾಲೇಜು ಹತ್ತಿರ) ಹಾಗೂ ರೂ.448.00 ಲಕ್ಷ ಮೊತ್ತದ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿನಿಲಯ( ಸ್ಥಳ-ಜಿಲ್ಲಾ ನ್ಯಾಯಾಲಯದ ಹತ್ತಿರ) ಇಲ್ಲಿನ ನೂತನ ಕಟ್ಟಡ ನಿರ್ಮಾಣ ಕಾಮಗಾರಿಗೆ ಶುಕ್ರವಾರ ಭೂಮಿ ಪೂಜೆ ನೆರವೇರಿಸಿದರು.