ಹುಣ್ಣಿಮೆಯ ಅಂಗವಾಗಿ ನಾಪೋಕ್ಲುವಿನಲ್ಲಿ ಜೀವನದಿ ಕಾವೇರಿಗೆ ಶ್ರೀ ಕ್ಷೇತ್ರಧರ್ಮಸ್ಥಳ ಸಂಘದಿಂದ ಮಹಾ ಆರತಿ ಕಾರ್ಯಕ್ರಮ
admincoorgdaily

ವರದಿ:ಝಕರಿಯ
ನಾಪೋಕ್ಲು: ಹುಣ್ಣಿಮೆಯ ಅಂಗವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಭಾಗಮಂಡಲ ವಲಯದ ವತಿಯಿಂದ ನಾಪೋಕ್ಲುವಿನಲ್ಲಿ ಜೀವನದಿ ಕಾವೇರಿಗೆ 26ನೇ ಮಹಾ ಆರತಿಯನ್ನು ಅರ್ಪಿಸುವ ಕಾರ್ಯಕ್ರಮ ನಡೆಸಲಾಯಿತು. ನಾಪೋಕ್ಲು ಸಮೀಪದ ಕೊಟ್ಟಮುಡಿ ಸೇತುವೆ ಬಳಿಯ ಕಾವೇರಿ ನದಿ ತಟದಲ್ಲಿ ಆರತಿ ಬೆಳಗಿ ಪ್ರಾರ್ಥನೆ ಸಲ್ಲಿಸಲಾಯಿತು.
ಕಾರ್ಯಕ್ರಮದಲ್ಲಿ ಧರ್ಮಸ್ಥಳ ಸಂಘದ ಮೇಲ್ವಿಚಾರಕರಾದ ಸಂತೋಷ್ ಅವರು ಮಾತನಾಡಿ ಪವಿತ್ರ ನದಿ ಕಾವೇರಿಯ ಸ್ವಚ್ಛತೆಯನ್ನು ಕಾಪಾಡಿ ಸಂರಕ್ಷಿಸುವುದು ನಮ್ಮೆಲ್ಲರ ಹೊಣೆಯಾಗಿದೆ. ಜಿಲ್ಲೆಯ ವಿವಿಧ ಭಾಗಗಳಲ್ಲಿ ಕಾವೇರಿ ನದಿಗೆ ಆರತಿ ಬೆಳಗುವ ಕಾರ್ಯಕ್ರಮವನ್ನು ಆಯೋಜಿಸುತ್ತಾ ಜನರಿಗೆ ನದಿಯ ಸ್ವಚ್ಛತೆಯ ಅರಿವು ಮೂಡಿಸುತ್ತಾ ಬಂದಿದ್ದೇವೆ.
ಎಲ್ಲರೂ ಕೂಡ ತಮ್ಮ ವ್ಯಾಪ್ತಿಯಲ್ಲಿರುವ ನದಿಗಳಿಗೆ ತ್ಯಾಜ್ಯಗಳನ್ನು ಹಾಕದೆ ಅದರ ಪಾವಿತ್ರ್ಯತೆಯನ್ನು ಕಾಪಾಡಿಕೊಳ್ಳಬೇಕೆಂದು ತಿಳಿಸಿದರು. ಆಯೋಜಿತ ಕಾರ್ಯಕ್ರಮದಲ್ಲಿ ಧರ್ಮಸ್ಥಳ ಸಂಘದ ನಾಪೋಕ್ಲು ಒಕ್ಕೂಟದ ಸೇವಾ ಪ್ರತಿನಿಧಿ ಉಮಾ ಲಕ್ಷ್ಮಿ, ಸಂಘದ ಸದಸ್ಯರಾದ ದಿಲೀಶ್, ಶಂಕರ, ಮಾಯಿಲಪ್ಪ,ರಮ್ಯ, ಪ್ರಾರ್ಥನ್, ರಶ್ಮಿ, ವಿಕಾಸ್,ಕೃಷ್ಣ, ಸುರೇಶ್ ಮತ್ತಿತರರು ಹಾಜರಿದ್ದರು.