ಹುಣ್ಣಿಮೆಯ ಅಂಗವಾಗಿ ನಾಪೋಕ್ಲುವಿನಲ್ಲಿ ಜೀವನದಿ ಕಾವೇರಿಗೆ ಶ್ರೀ ಕ್ಷೇತ್ರಧರ್ಮಸ್ಥಳ ಸಂಘದಿಂದ ಮಹಾ ಆರತಿ ಕಾರ್ಯಕ್ರಮ
admincoorgdaily

ವರದಿ:ಝಕರಿಯ ನಾಪೋಕ್ಲು ನಾಪೋಕ್ಲು : ಹುಣ್ಣಿಮೆಯ ಅಂಗವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಭಾಗಮಂಡಲ ವಲಯದ ವತಿಯಿಂದ ನಾಪೋಕ್ಲುವಿನಲ್ಲಿ ಜೀವನದಿ ಕಾವೇರಿಗೆ ಮಹಾ ಆರತಿಯನ್ನು ಅರ್ಪಿಸುವ ಕಾರ್ಯಕ್ರಮ ನಡೆಸಲಾಯಿತು.
ನಾಪೋಕ್ಲು ಸಮೀಪದ ಕೊಟ್ಟಮುಡಿ ಸೇತುವೆ ಬಳಿಯ ಕಾವೇರಿ ನದಿ ತಟದಲ್ಲಿ ಆರತಿ ಬೆಳಗಿ ಪ್ರಾರ್ಥನೆ ಸಲ್ಲಿಸಲಾಯಿತು. ಆಯೋಜಿತ ಕಾರ್ಯಕ್ರಮದಲ್ಲಿ ಧರ್ಮಸ್ಥಳ ಸಂಘದ ನಾಪೋಕ್ಲು ಸುಭಾಷ್ ನಗರ ಒಕ್ಕೂಟದ ಸೇವಾ ಪ್ರತಿನಿಧಿ ಉಮಾ ಲಕ್ಷ್ಮಿ, ಸಂಘದ ಸದಸ್ಯರಾದ ರೋಜಾ,ದಿಲೀಶ್,ಆನಂದ್ ಹಾಜರಿದ್ದರು.