ಮಹಾರಾಷ್ಟ್ರ; ಬಾರಾಮತಿ ವಿಮಾನ ನಿಲ್ದಾಣದಲ್ಲಿ ಲ್ಯಾಡಿಂಗ್ ವೇಳೆ ವಿಮಾನ ಪತನ;ಡಿಸಿಎಂ ಅಜಿತ್ ಪವಾರ್ ಮೃತ್ಯು
admincoorgdaily

ಮಹಾರಾಷ್ಟ್ರದ: ಬಾರಾಮತಿ ವಿಮಾನ ನಿಲ್ದಾಣದ ಬಳಿ ಲ್ಯಾಂಡಿಂಗ್ ವೇಳೆ ಉಪಮುಖ್ಯಮಂತ್ರಿ ಅಜಿತ್ ಪವಾರ್ ಪ್ರಯಾಣಿಸುತ್ತಿದ್ದ ವಿಮಾನ ಬುಧವಾರ ಬೆಳಿಗ್ಗೆ ಪತನವಾಗಿತ್ತು. ಘಟನೆಯಲ್ಲಿ ಅಜಿತ್ ಪವಾರ್ ಸೇರಿ ಐವರು ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ವಿಮಾನದಲ್ಲಿ ಅಜಿತ್ ಪವಾರ್ ಮತ್ತು ಭದ್ರತಾ ಸಿಬ್ಬಂದಿ ಪ್ರಯಾಣಿಸುತ್ತಿದ್ದರು. ಅವಘಡದಲ್ಲಿ ವಿಮಾನದಲ್ಲಿದ್ದ ಯಾವುದೇ ವ್ಯಕ್ತಿ ಬದುಕುಳಿದಿಲ್ಲ ಎಂದು ತಿಳಿದು ಬಂದಿದೆ. ಬಾರಾಮತಿ ವಿಮಾನ ನಿಲ್ದಾಣದಲ್ಲಿ ತುರ್ತು ಲ್ಯಾಂಡಿಂಗ್‌ಗೆ ಪ್ರಯತ್ನಿಸುತ್ತಿದ್ದಾಗ ಅವಘಡ ಸಂಭವಿಸಿದೆ.