Kodagu

ಪೇರೂರು ಶ್ರೀ ಇಗ್ಗುತ್ತಪ್ಪ ದೇವಾಲಯದಲ್ಲಿ ಶ್ರದ್ಧಾ ಭಕ್ತಿಯಿಂದ ಜರುಗಿದ ಮಹಾಶಿವರಾತ್ರಿ ಆಚರಣೆ

admincoorgdaily

ಪೇರೂರು ಶ್ರೀ ಇಗ್ಗುತ್ತಪ್ಪ ದೇವಾಲಯದಲ್ಲಿ ಶ್ರದ್ಧಾ ಭಕ್ತಿಯಿಂದ ಜರುಗಿದ  ಮಹಾಶಿವರಾತ್ರಿ ಆಚರಣೆ

ವರದಿ:ಝಕರಿಯ ನಾಪೋಕ್ಲು

ನಾಪೋಕ್ಲು: ನಾಪೋಕ್ಲು ಬಳಿಯ ಪೇರೂರು ಗ್ರಾಮದ ಶ್ರೀ ಇಗ್ಗುತ್ತಪ್ಪ ದೇವಾಲಯದಲ್ಲಿ ಭಾನುವಾರ ಶಿವರಾತ್ರಿ ಪ್ರಯುಕ್ತ ವಿಶೇಷ ಪೂಜೆ ರುದ್ರಾಭಿಷೇಕ ಮತ್ತು ಮಹಾಪೂಜೆ ಜರುಗಿತು. ಭಕ್ತರು ಬೆಳಿಗ್ಗೆಯಿಂದಲೇ ದೇವಾಲಯಕ್ಕೆ ತೆರಳಿ ಪೂಜೆ ಸಲ್ಲಿಸಿದರು. ಮಧ್ಯಾಹ್ನ ಭಕ್ತರಿಂದ ತುಲಾಭಾರ ಸೇವೆ ನಡೆಯಿತು.

ಪೂಜೆಯ ಬಳಿಕ ಭಕ್ತರಿಗೆ ಅನ್ನಸಂತರ್ಪಣೆ ನಡೆಯಿತು. ಮಧ್ಯಾಹ್ನ ದೇವಾಲಯದ ಆವರಣದಲ್ಲಿ ಗ್ರಾಮಸ್ಥರಿಂದ ಬೊಳಕಾಟ್ ಪ್ರದರ್ಶನ ಏರ್ಪಡಿಸಲಾಯಿತು. ಬಳಿಕ ಇಗ್ಗುತ್ತಪ್ಪ ದೇವರ ಉತ್ಸವ ಜರುಗಿತು.

ಅಪಾರ ಸಂಖ್ಯೆಯಲ್ಲಿ ಸೇರಿದ್ದ ಭಕ್ತರು ಉತ್ಸವದಲ್ಲಿ ಪಾಲ್ಗೊಂಡು ದೇವರ ನೃತ್ಯಬಲಿ ವೀಕ್ಷಿಸಿದರು. ದೇವಾಲಯದ ಅರ್ಚಕ ಗಿರೀಶ್ ನೇತೃತ್ವದಲ್ಲಿ ರುದ್ರಾಭಿಷೇಕ, ವಿಶೇಷ ಪೂಜೆಗಳು ಸೇರಿದಂತೆ ಹಲವು ಕಾರ್ಯಕ್ರಮಗಳು ಜರುಗಿದವು. ದೇವಾಲಯದ ಆಡಳಿತ ಮಂಡಳಿ ಅಧ್ಯಕ್ಷರು,ತಕ್ಕ ಮುಖ್ಯಸ್ಥರು,ದೇವಾಲಯ ಅಭಿವೃದ್ದಿ ಸಮಿತಿ ಸದಸ್ಯರು,ಅಧಿಕ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡಿದ್ದರು.