State News

ಗಡಿಪಾರಿನಿಂದ ಮಹೇಶ್ ಶೆಟ್ಟಿ ತಿಮರೋಡಿ ಪಾರು; ಹೈಕೋರ್ಟ್‌ನಿಂದ ತಾತ್ಕಾಲಿಕ ರಿಲೀಫ್

admincoorgdaily

ಬೆಂಗಳೂರು, ಅ.13: ಧರ್ಮಸ್ಥಳದ ಬುರುಡೆ ಪ್ರಕರಣ ಹಾಗೂ ಸೌಜನ್ಯ ಪ್ರಕರಣಗಳಲ್ಲಿ ಸಕ್ರಿಯ ಹೋರಾಟ ನಡೆಸಿದ್ದ ಸಾಮಾಜಿಕ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ಕರ್ನಾಟಕ ಹೈಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ.

 ಪುತ್ತೂರು ಉಪವಿಭಾಗಾಧಿಕಾರಿ ಸ್ಟೆಲ್ಲಾ ವರ್ಗೀಸ್ ಹೊರಡಿಸಿದ್ದ ಗಡಿಪಾರು ಆದೇಶವನ್ನು ಪ್ರಶ್ನಿಸಿ ತಿಮರೋಡಿ ಅವರು ಸಲ್ಲಿಸಿದ್ದ ರಿಟ್ ಅರ್ಜಿಯ ವಿಚಾರಣೆ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಪೀಠದಲ್ಲಿ ನಡೆಯಿತು. ವಿಚಾರಣೆ ಬಳಿಕ ಹೈಕೋರ್ಟ್ ಮುಂದಿನ ಆದೇಶ ಬರುವವರೆಗೆ ಯಾವುದೇ ಬಲವಂತದ ಕ್ರಮ ಕೈಗೊಳ್ಳಬಾರದು ಎಂದು ಸ್ಪಷ್ಟ ನಿರ್ದೇಶನ ನೀಡಿದೆ.ಇದರಿಂದ ತಿಮರೋಡಿ ಅವರಿಗೆ ತಾತ್ಕಾಲಿಕವಾಗಿ ಗಡಿಪಾರಿನಿಂದ ಪಾರಾಗುವ ಅವಕಾಶ ದೊರೆತಿದೆ.

ಸೆಪ್ಟೆಂಬರ್ 20ರಂದು ಪುತ್ತೂರು ಸಹಾಯಕ ಆಯುಕ್ತರು ಮಹೇಶ್ ಶೆಟ್ಟಿ ತಿಮರೋಡಿಯವರನ್ನು ಒಂದು ವರ್ಷಾವಧಿಗೆ ರಾಯಚೂರಿನ ಮಾನ್ವಿ ತಾಲೂಕಿಗೆ ಗಡಿಪಾರು ಮಾಡುವಂತೆ ಆದೇಶಿಸಿದ್ದರು. ತಿಮರೋಡಿ ವಿರುದ್ಧ ಸುಮಾರು 32ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದವು.