ಮಹಿಳಾ ಕಾಂಗ್ರೆಸ್ ಸಭೆ:ಪಕ್ಷದ ಬೆಳವಣಿಗೆ ಮಹಿಳಾ ಕಾಂಗ್ರೆಸ್ ಪಾತ್ರ ಮುಖ್ಯ:ಶಾಸಕ ಎ.ಎಸ್ ಪೊನ್ನಣ್ಣ
admincoorgdaily
ಮಡಿಕೇರಿ:ಜಿಲ್ಲಾ ಕಾಂಗ್ರೆಸ್ ಕಚೇರಿ ಮಡಿಕೇರಿಯಲ್ಲಿ ಆಯೋಜನೆಗೊಂಡಿದ್ದ ಮಹಿಳಾ ಕಾಂಗ್ರೆಸ್ ಸಭೆಯಲ್ಲಿ ವಿರಾಜಪೇಟೆ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಭಾಗವಹಿಸಿದರು. ಕೆಪಿಸಿಸಿ ಮಹಿಳಾ ಕಾಂಗ್ರೆಸ್ ಅಧ್ಯಕ್ಷ ಸೌಮ್ಯ ರೆಡ್ಡಿ ರವರು ಜಿಲ್ಲೆಯ ಮಹಿಳಾ ಕಾಂಗ್ರೆಸ್ ಘಟಕವನ್ನು ಬಲಪಡಿಸುವ ನಿಟ್ಟಿನಲ್ಲಿ ಜಿಲ್ಲೆಗೆ ಪ್ರವಾಸ ಕೈಗೊಂಡಿದ್ದರು.
ಸಭೆಯನ್ನುದ್ದೇಶಿಸಿ ಮಾತನಾಡಿದ ಶಾಸಕರಾದ ಎ.ಎಸ್ ಪೊನ್ನಣ್ಣ, ಪಕ್ಷದ ಬೆಳವಣಿಗೆ ಮಹಿಳಾ ಕಾಂಗ್ರೆಸ್ ಕೊಡುಗೆ ತುಂಬಾ ದೊಡ್ಡದಿದೆ. ಈಗಿನ ಕಾಂಗ್ರೆಸ್ ಸರ್ಕಾರ ವಿಶೇಷವಾಗಿ ಮಹಿಳೆಯರಿಗೆ ಬೇಕಾದಂತಹ ಎಲ್ಲಾ ಭಾಗ್ಯಗಳನ್ನು ಕರುಣಿಸಿ ಮನೆ ಮಾತಾಗಿದೆ. ಇಂತಹ ಸಂದರ್ಭದಲ್ಲಿ ಮಹಿಳಾ ಕಾಂಗ್ರೆಸ್ ಬಲಪಡಿಯುವುದು ಮಾತ್ರವಲ್ಲ ರಾಜ್ಯ ಸರ್ಕಾರದ ಎಲ್ಲಾ ಕಾರ್ಯಕ್ರಮಗಳನ್ನು ಮನೆಮನೆಗೆ ತಲುಪಿಸುವ ಕಾರ್ಯದಲ್ಲಿ ನಿರತರಾಗಬೇಕೆಂದು ಕರೆ ನೀಡಿದರು. ಈ ಸಭೆಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಧರ್ಮಜ ಉತ್ತಪ್ಪ, ಮಡಿಕೇರಿ ಕ್ಷೇತ್ರದ ಶಾಸಕರಾದ ಡಾ. ಮಂತರ್ ಗೌಡ, ಮಾಜಿ ವಿಧಾನಪರಿಷತ್ ಸದಸ್ಯರುಗಳಾದ ಶ್ರೀಮತಿ ವೀಣಾ ಅಚ್ಚಯ್ಯ, ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾದ ಸುರಯ್ಯಾ ಅಬ್ರಾರ್,ಅರುಣ್ ಮಾಚಯ್ಯ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯವರಾದ ಶ್ರೀಮತಿ ಚಂದ್ರಕಲಾ ಹಾಗೂ ಪಕ್ಷದ ಮಹಿಳಾ ಪ್ರಮುಖರು ಉಪಸ್ಥಿತರಿದ್ದರು.