ಮಾಲಂಬಿ ರಸ್ತೆ ಕಾಂಕ್ರೀಟ್ ಕಾಮಗಾರಿ ಪೂರ್ಣ
admincoorgdaily

ಶನಿವಾರಸಂತೆ: ಆಲೂರು ಸಿದ್ದಾಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಾಲಂಬಿ ಒಳರಸ್ತೆ ಅನೇಕ ವರ್ಷಗಳಿಂದ ಗುಂಡಿಮಯವಾಗಿತ್ತು. ಈ ರಸ್ತೆಯ ಅವ್ಯವಸ್ಥೆಯಿಂದ ಶಾಲಾ-ಕಾಲೇಜು ವಿದ್ಯಾರ್ಥಿಗಳು, ವೃದ್ಧರು ಹಾಗೂ ಕೃಷಿಕರು ಪ್ರತಿನಿತ್ಯ ತೊಂದರೆ ಅನುಭವಿಸುತ್ತಿದ್ದರು.
ರಸ್ತೆಯ ದುಸ್ಥಿತಿಯನ್ನು ಕಣ್ಣಾರೆ ಕಂಡ ಮಡಿಕೇರಿ ಕ್ಷೇತ್ರದ ಶಾಸಕರಾದ ಮಂತರ್ ಗೌಡ ಅವರು ತಾವೇ ಮುತುವರ್ಜಿ ವಹಿಸಿ ಕಾಮಗಾರಿಗೆ ಚಾಲನೆ ನೀಡಿದ್ದರು. ಇದೀಗ ನೆನೆಗುದಿಗೆ ಬಿದ್ದ ರಸ್ತೆ ಕಾಮಗಾರಿ ಕಾಂಕ್ರೀಟ್ ರಸ್ತೆಯಾಗಿ ರೂಪಾಂತರಗೊಂಡು ಮುಕ್ತಾಯದ ಹಂತ ತಲುಪಿದೆ. ರಸ್ತೆ ಅಭಿವೃದ್ಧಿಯಿಂದ ಸಂತಸಗೊಂಡ ಗ್ರಾಮಸ್ಥರು ಶಾಸಕ ಮಂತರ್ ಗೌಡ ಅವರನ್ನು ಅಭಿನಂದಿಸಿದ್ದಾರೆ. ವರ್ಷಗಳಿಂದ ಬಾಕಿ ಉಳಿದಿದ್ದ ಕೆಲಸ ಪೂರ್ಣಗೊಂಡಿರುವುದು ಮಾಲಂಬಿ ಗ್ರಾಮದ ಜನರಿಗೆ ದೊಡ್ಡ ಅನುಕೂಲವಾಗಿದೆ.