ಕೊಡಗು ಜಿಲ್ಲೆಯಲ್ಲಿ ಡೇಟಿಂಗ್ ಗೆ ಹುಡುಗಿಯರು ಲಭ್ಯ ಎಂದು Instagram ನಲ್ಲಿ ಪೋಸ್ಟ್ ಮಾಡಿದ್ದ ವ್ಯಕ್ತಿ ಅರೆಸ್ಟ್

ಕೊಡಗು ಜಿಲ್ಲೆಯಲ್ಲಿ ಡೇಟಿಂಗ್ ಗೆ ಹುಡುಗಿಯರು ಲಭ್ಯ ಎಂದು Instagram ನಲ್ಲಿ ಪೋಸ್ಟ್ ಮಾಡಿದ್ದ ವ್ಯಕ್ತಿ ಅರೆಸ್ಟ್

ಮಡಿಕೇರಿ: ಕೊಡಗು ಜಿಲ್ಲಾ ಪೊಲೀಸ್‌ ಘಟಕದ ಸಾಮಾಜಿಕ ಜಾಲತಾಣ ನಿರ್ವಹಣೆ ಮತ್ತು ಕಣ್ಗಾವಲು ತಂಡವು ಪರಿಶೀಲನೆ ಸಂದರ್ಭ Instagramb kotya 2026 ಎಂಬ ಖಾತೆಯಲ್ಲಿ ಮಡಿಕೇರಿ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ವಿಡಿಯೋ ಬಳಸಿಕೊಂಡು ಮಡಿಕೇರಿ ಜಿಲ್ಲೆಯಲ್ಲಿ ಎಲ್ಲಿ ಹುಡುಗಿ ಆಂಟಿ ಡೇಟಿಂಗ್ ಮಾಡಲಿಕ್ಕೆ, ಸರ್ವಿಸ್ ಬೇಕಾದ್ರೆ ಕಾಲ್ ಮಾಡಿ 8904088873 ಎಂಬುದಾಗಿ ಅಪ್ ಲೋಡ್ ಮಾಡಿದ್ದ. ವಿಡಿಯೋ ಕುರಿತು ಮಡಿಕೇರಿ ನಗರ ಪೊಲೀಸ್‌ ಠಾಣೆಯಲ್ಲಿ ಕಲಂ: 318(4), 78 ಬಿಎನ್ ಎಸ್ & 66(2), 67 IT Act Indecent Representation of Women (Prohibition) Act & 8 Immoral Traffic (Prevention) Act ದಾಖಲಿಸಲಾಗಿತ್ತು.

ಪ್ರಕರಣದ ಆರೋಪಿಯನ್ನು ಪತ್ತೆಗಾಗಿ ಸೂರಜ್.ಪಿ.ಎ, ಡಿಎಪಿ, ಮಡಿಕೇರಿ ಉಪವಿಭಾಗ, ರಾಜು.ಪಿ.ಕೆ. ಸಿಪಿಐ, ಮಡಿಕೇರಿ ನಗರ ವೃತ್ತ, ಕು. ಅನ್ನಪೂರ್ಣ.ಎಸ್.ಎಸ್. ಪಿಎಸ್‌ಐ, ಮಡಿಕೇರಿ ನಗರ ಪೊಲೀಸ್ ಠಾಣೆ ಹಾಗೂ ಸಿಬ್ಬಂದಿಗಳ ತಂಡ ತನಿಖೆ ಕೈಗೊಂಡು ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ವಿಡಿಯೋ ಅಪಲೋಡ್ ಮಾಡಿದ್ದ ಖಾತೆದಾರ ಬಾಗಲಕೋಟೆ ಜಿಲ್ಲೆ ಮುಧೋಳ ತಾ|| ಬೆಳಗಲಿ ಗ್ರಾಮದ ನಿವಾಸಿ ನಾಗಪ್ಪ ಹನುಮಂತ ಲಮಾಣಿ, (26 ವರ್ಷ) ಎಂಬಾತನನ್ನು ಪತ್ತೆಮಾಡಿ ದಿ: 30-08-2025 ರಂದು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ.

 ಸದರಿ ಪ್ರಕರಣದ ಆರೋಪಿಯನ್ನು ಪತ್ತೆ ಮಾಡುವಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಅಧಿಕಾರಿ ಹಾಗೂ ಸಿಬ್ಬಂದಿರವರುಗಳನ್ನು ಕೆ.ರಾಮರಾಜನ್, ಐಪಿಎಸ್, ಪೊಲೀಸ್ ಅಧೀಕ್ಷಕರು, ಕೊಡಗು ಜಿಲ್ಲೆ ಮತ್ತು. ಬಿ.ಪಿ ದಿನೇಶ್ ಕುಮಾ‌ರ್, ಹೆಚ್ಚುವರಿ ಪೊಲೀಸ್ ಅಧೀಕ್ಷಕರು, ಕೊಡಗು ಜಿಲ್ಲೆ ರವರು ಶ್ಲಾಘಿಸಿರುತ್ತಾರೆ.