ಸೋಮವಾರಪೇಟೆ;ಅಕ್ರಮ ಗೋಮಾಂಸ ಮಾರಾಟ ಮಾಡುತ್ತಿದ್ದ ವ್ಯಕ್ತಿ ಬಂಧನ

Feb 17, 2026 - 09:49
 0  1.2k
ಸೋಮವಾರಪೇಟೆ;ಅಕ್ರಮ ಗೋಮಾಂಸ ಮಾರಾಟ ಮಾಡುತ್ತಿದ್ದ ವ್ಯಕ್ತಿ ಬಂಧನ

ಸೋಮವಾರಪೇಟೆ,ಫೆ.16: ತಾಲೂಕಿನ ಜಂಬೂರು ಗ್ರಾಮದಲ್ಲಿ ಅಕ್ರಮವಾಗಿ ಗೋ ಮಾಂಸವನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿಯನ್ನು ಹಿಂದೂ ಜಾಗರಣಾ ವೇದಿಕೆಯ ಕಾರ್ಯಕರ್ತರು ಪತ್ತೆಹಚ್ಚಿ, ಸೋಮವಾರಪೇಟೆ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ ಮೇರೆ, ಪೊಲೀಸರು ವಾಹನ ಸಹಿತ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

ಸೋಮವಾರ ರಾತ್ರಿ ಕೆಂಪು ಬಣ್ಣದ ಡಸ್ಟರ್ ಕಾರಿನಲ್ಲಿ ಸುಂಟಿಕೊಪ್ಪದ ಸುಹೈಲ್ ಎಂಬಾತ ಸುಮಾರು 15 ಕೆ.ಜಿ.ಯಷ್ಟು ಗೋಮಾಂಸವನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಪಡೆದ ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತರು, ಸ್ಥಳೀಯರ ಸಹಕಾರದಿಂದ ಕಾರನ್ನು ಪರಿಶೀಲಿಸಿದ ಸಂದರ್ಭ 15 ಕೆ.ಜಿ.ಯಷ್ಟು ಗೋ ಮಾಂಸ ಅಕ್ರಮವಾಗಿ ಸಾಗಾಟಗೊಳ್ಳುತ್ತಿದ್ದುದು ಕಂಡುಬಂದಿದೆ.

ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ ಮೇರೆ, ಸ್ಥಳಕ್ಕಾಗಮಿಸಿದ ಪೊಲೀಸರು, ಆರೋಪಿ ಸುಹೈಲ್ ಸಹಿತ ಕೃತ್ಯಕ್ಕೆ ಬಳಸಿದ ಡಸ್ಟರ್ ಕಾರು, ಅಕ್ರಮ ಗೋ ಮಾಂಸವನ್ನು ವಶಕ್ಕೆ ಪಡೆದಿದ್ದಾರೆ.

What's Your Reaction?

Like Like 2
Dislike Dislike 3
Love Love 1
Funny Funny 1
Angry Angry 1
Sad Sad 1
Wow Wow 1