ಮನೆಯ ಮುಂದೆ ಕೆಮ್ಮಿದ್ದಕ್ಕೆ ಮಾರಣಾಂತಿಕ ಹಲ್ಲೆ;ಚಿಕಿತ್ಸೆ ಫಲಿಸದೆ ಮೃತಪಟ್ಟ ವ್ಯಕ್ತಿ
ರಾಮನಗರ, ಫೆ 11: ಸಮಾಜದಲ್ಲಿ ಯಾವ್ಯಾವುದೋ ವಿಚಾರಕ್ಕೆ ಗಲಾಟೆ, ಹಲ್ಲಗಳು ನಡೆಯುತ್ತವೆ. ಆದರೆ ವ್ಯಕ್ತಿಯೊಬ್ಬ ಮನೆ ಮುಂದೆ ಬಂದು ಕೆಮ್ಮಿದ ಎನ್ನವ ಕ್ಷುಲ್ಲಕ ಕಾರಣಕ್ಕೆ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ರಾಮನಗರ (Ramnagar) ತಾಲೂಕಿನ ಬಿಡದಿಯಲ್ಲಿ ನಡೆದಿದೆ.
ರಾಜಸ್ಥಾನ ಮೂಲದ ವ್ಯಕ್ತಿಯೊಬ್ಬ ಕೆಮ್ಮಿದ ವಿಚಾರಕ್ಕೆ ಶುರುವಾದ ಜಗಳ ವಿಕೋಪಕ್ಕೆ ತಿರುಗಿದೆ. ಸಣ್ಣದಾಗಿ ಶುರುವಾದ ಮಾತಿನ ಚಕಮಕಿ ವಿಕೋಪಕ್ಕೆ ತಿರುಗಿತು ರಾಜಸ್ಥಾನ ಮೂಲದ ವಿನೋದ್ ಕುಮಾರ್ ಶೈನಿ (34) ಕಳೆದ 11 ವರ್ಷಗಳಿಂದ ಬಿಡದಿಯ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು, ಅಲ್ಲಿಯೇ ವಾಸವಾಗಿದ್ದರು.
ಮೂರು ದಿನಗಳ ಹಿಂದೆ ಮನೆ ಪಕ್ಕದಲ್ಲಿದ್ದ ಸಂಜಯ್ ಅವರೊಂದಿಗೆ ಮಾತಿನ ಚಕಮಕಿ ಉಂಟಾಗಿದ್ದು, ಕೆಮ್ಮಿದ ವಿಚಾರಕ್ಕೆ ಜಗಳ ತೀವ್ರಗೊಂಡಿದೆ ಎನ್ನಲಾಗಿದೆ. ಈ ವೇಳೆ ಸಂಜಯ್, ಹೊಂಬಯ್ಯ (ಹೊಂಬೆಗೌಡ), ವಿಜಯ್ ಸೇರಿದಂತೆ ಇತರರು ಸೇರಿ ವಿನೋದ್ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.
ಗಂಭೀರವಾಗಿ ಗಾಯಗೊಂಡ ವಿನೋದ್ ಅವರನ್ನು ತಕ್ಷಣ ಬಿಡದಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ ರಾತ್ರಿ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಘಟನೆ ಸಂಬಂಧ ಬಿಡದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹಲ್ಲೆ ನಡೆಸಿದ ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಪರಾರಿಯಾಗಿರುವ ಆರೋಪಿಗಳ ಬಂಧನಕ್ಕಾಗಿ ಪೊಲೀಸರು ವ್ಯಾಪಕ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ.
What's Your Reaction?
Like
0
Dislike
1
Love
2
Funny
0
Angry
1
Sad
1
Wow
1
