ಪೊಲೀಸ್ ವಿಚಾರಣೆಗೆ ಹೋದ ವ್ಯಕ್ತಿ ಕಾಣೆ:ಪೊನ್ನಂಪೇಟೆ ಠಾಣೆಯಲ್ಲಿ ದೂರು ದಾಖಲು
ಗೋಣಿಕೊಪ್ಪ, ಜೂ. 26: ಪೊನ್ನಂಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಮಧು ಎಚ್.ಎಸ್ (35-) ಕಾಣೆಯಾಗಿದ್ದಾರೆ ಎಂದು ಅವರ ತಂದೆ ಸುರೇಶ್ ಪೊನ್ನಂಪೇಟೆ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ತಾ. 16ರಂದು ಪಿರಿಯಾಪಟ್ಟಣ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವೊಂದರ ವಿಚಾರಣೆಗೆ ಹಾಜರಾಗಲು ಪೊಲೀಸರು ಮಧು ಅವರನ್ನು ಕರೆದಿದ್ದರು. ಅದರಂತೆ ಮಧು ಪಿರಿಯಾಪಟ್ಟಣಕ್ಕೆ ತೆರಳಿದ್ದು, ಬಳಿಕ ಮನೆಗೆ ಹಿಂದಿರುಗಿಲ್ಲ ಎಂದು ದೂರಿನಲ್ಲಿ ತಿಳಿಸಲಾಗಿದೆ. ಮಧು ಪತ್ತೆಯಾದಲ್ಲಿ ಪೊನ್ನಂಪೇಟೆ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಪೊಲೀಸರು ಸಾರ್ವಜನಿಕರಲ್ಲಿ ಕೋರಿದ್ದಾರೆ.
What's Your Reaction?
Like
0
Dislike
0
Love
1
Funny
0
Angry
1
Sad
0
Wow
0
