ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: ಬೃಹತ್ ಪ್ರಮಾಣದಲ್ಲಿ 123 ಕೆಜಿ ಗಾಂಜಾ ಸಾಗಾಟ ಪತ್ತೆ, 3 ಆರೋಪಿಗಳ ಸೆರೆ

Aug 2, 2025 - 12:13
Aug 2, 2025 - 12:14
 0  339
ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: ಬೃಹತ್ ಪ್ರಮಾಣದಲ್ಲಿ 123 ಕೆಜಿ ಗಾಂಜಾ ಸಾಗಾಟ ಪತ್ತೆ, 3 ಆರೋಪಿಗಳ ಸೆರೆ

ಮಂಗಳೂರು:ನಗರ ಸಿಸಿಬಿ ತಂಡವು ಮಾದಕ ವಸ್ತುಗಳ ಅಕ್ರಮ ಸಾಗಣೆ ವಿರುದ್ಧ ಕೈಗೊಂಡಿರುವ ಭಾಗವಾಗಿ ದೊಡ್ಡ ಪ್ರಮಾಣದ 123 ಕೆಜಿ ಗಾಂಜಾ ಮತ್ತು ಅದನ್ನು ಸಾಗಾಟ ಮಾಡುತ್ತಿದ್ದ ವಾಹನಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಕಾರ್ಯಾಚರಣೆಯಲ್ಲಿ 3 ಆರೋಪಿಗಳನ್ನು ಬಂಧಿಸಲಾಗಿದ್ದು, ಆಂಧ್ರಪ್ರದೇಶದಿಂದ ಗಾಂಜಾ ಸಾಗಾಟ ಮಾಡುತ್ತಿದ್ದರು.ಸಿಸಿಬಿ ಪೊಲೀಸರು ದಿನಾಂಕ 31-07-2025 ರಂದು 2 ಕಾರುಗಳಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯನ್ನು ಪಡೆದು, ಮೂಡಬಿದಿರೆ ತಾಲ್ಲೂಕಿನ ಬೆಳುವಾಯಿ ಗ್ರಾಮದ ಕಾಂತಾವರ ಕ್ರಾಸ್ ನ ಮಠದಕೆರೆ ಎಂಬ ಸ್ಥಳದಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಗಾಂಜಾ ಸಮೇತ 2 ವಾಹನಗಳನ್ನು ಪತ್ತೆಹಚ್ಚಿದ್ದಾರೆ ಬಂಧಿತ ಆರೋಪಿಗಳಾದ ಮಸೂದ್ ಎಂಕೆ (45 ವರ್ಷ),ಮೊಗರು ಹೌಸ್, ಆಡೂರು, ಉರ್ದೂರು ಕಾಸರಗೋಡು, ಮೊಹಮ್ಮದ್ ಆಶಿಕ್ (24 ವರ್ಷ) ಕಾಸರಗೋಡು ಸುಬೇರ್ (30 ವರ್ಷ) ಕಾಸರಗೋಡು ಇವರನ್ನು ಬಂಧಿಸಲಾಗಿದೆ. ಪೊಲೀಸರು ಆರೋಪಿಗಳಿಂದ 123 ಕೆಜಿ ಗಾಂಜಾ, ಎರಡು ವಾಹನಗಳು (KA-21-P-9084 ಹಾಗೂ KL-14-AF-7010) ಮತ್ತು 5 ಮೊಬೈಲ್ ಫೋನ್ಗಳನ್ನು ವಶಪಡಿಸಿಕೊಂಡಿದ್ದು, ಈ ಎಲ್ಲಾ ಸೊತ್ತಿನ ಒಟ್ಟು ಮೌಲ್ಯ ಸುಮಾರು 46, 20,000 ರೂ. ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಮೂಡಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

What's Your Reaction?

Like Like 1
Dislike Dislike 0
Love Love 0
Funny Funny 1
Angry Angry 0
Sad Sad 1
Wow Wow 0