ಮರಗೋಡು:ಬೀಳ್ಕೊಡುಗೆ ಸಮಾರಂಭ ಮತ್ತು ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮ

ಮರಗೋಡು: ಅಂಗನವಾಡಿ ಕೇಂದ್ರದಲ್ಲಿ ಸ್ತನ್ಯಪಾನ ಸಪ್ತಾಹ ಮತ್ತು ಬೀಳ್ಕೊಡುಗೆ ಸಮಾರಂಭ ಕಾರ್ಯಕ್ರಮವು ನಡೆಯಿತು. ಕಾರ್ಯಕ್ರಮದಲ್ಲಿ ಮೇಲ್ವಿಚಾರಕರು ಹಾಗೂ ಪ್ರಭಾರ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮೇಪಾಡಂಡ ಸವಿತಾ ಕೀರ್ತನ್ ರವರು ಎದೆ ಹಾಲಿನ ಮಹತ್ವದ ಬಗ್ಗೆ ಹೇಳಿದರು.
ಮರಗೋಡು ವೃತ್ತಕ್ಕೆ ಸೇರಿದ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರೊಂದಿಗೆ ಕತ್ತಲೆಕಾಡು ಅಂಗನವಾಡಿ ಕೇಂದ್ರದಲ್ಲಿ 31 ವರ್ಷಗಳ ಕಾಲ ಅಂಗನವಾಡಿ ಕಾರ್ಯಕರ್ತೆಯಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಕಾರ್ಯಕರ್ತೆಯಾದ ಬಿ.ಕೆ ಸುಶೀಲಾ ರವರನ್ನು ಬೀಳ್ಕೊಡುಗೆ ಸಮಾರಂಭದಲ್ಲಿ ಗೌರವಿಸಿದರು. ಕಾರ್ಯಕ್ರಮವನ್ನು ಕಡಗದಾಳು ಅಂಗನವಾಡಿ ಕಾರ್ಯಕರ್ತೆ ಕೆ ಆರ್ ಅನಿಲ ಸ್ವಾಗತಿಸಿ, ವಂದನಾರ್ಪಣೆಯನ್ನು ಮರಗೋಡು ಅಂಗನವಾಡಿ ಕಾರ್ಯಕರ್ತೆ ಅಕ್ಕಮ್ಮ ನೆರವೇರಿಸಿದರು.