Kodagu

ಮರಗೋಡು: ತಾನು ಪ್ರೀತಿಸುತ್ತಿದ್ದ ಯುವತಿಗೆ ಬೇರೊಬ್ಬನೊಂದಿಗೆ ನಿಶ್ಚಿತಾರ್ಥ,ಮನನೊಂದು ಯುವಕ ಆತ್ಮಹತ್ಯೆ

admincoorgdaily

ಮಡಿಕೇರಿ : ತಾನು ಪ್ರೀತಿಸುತ್ತಿದ್ದ ಯುವತಿಗೆ ಬೇರೊಬ್ಬನೊಂದಿಗೆ ನಿಶ್ಚಿತಾರ್ಥ ಆದ ವಿಚಾರ ತಿಳಿದು ಮನನೊಂದು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮರಗೋಡು ಜನತಾ ಕಾಲೋನಿಯಲ್ಲಿ ನಡೆದಿದೆ.ಕಾಲೋನಿ ನಿವಾಸಿ ಮನೋಜ್(26)‌ ಮೃತ ಯುವಕ. ಮನೋಜ್‌ ಉಡುಪಿಯಲ್ಲಿ ಹೋಟೆಲ್‌ ಮೇಲ್ವಿಚಾರಕನಾಗಿ ಕೆಲಸ ಮಾಡುತ್ತಿದ್ದ. ಅಲ್ಲಿ ಯುವತಿಯೊಬ್ಬಳ ಪರಿಚಯವಾಗಿದ್ದು, ಪರಸ್ಪರ ಪ್ರೀತಿಸುತ್ತಿದ್ದರು ಎನ್ನಲಾಗಿದೆ. ಈ ನಡುವೆ ಆಕೆಗೆ ಇತ್ತೀಚೆಗೆ ಬೇರೊಬ್ಬನೊಂದಿಗೆ ನಿಶ್ಚಿತಾರ್ಥವಾಗಿದೆ. ಈ ವಿಚಾರ ತಿಳಿದ ಮನೋಜ್‌ ಮಾನಸಿಕವಾಗಿ ಆಘಾತಕ್ಕೊಳಗಾಗಿದ್ದಾನೆ. ನಿನ್ನೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಸಂಬಂಧ ಮಡಿಕೇರಿ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.