Kodagu

ಗಾಂಜಾ ಮಾರಾಟ : ಇಬ್ಬರು ಆರೋಪಿಗಳ ಬಂಧನ

admincoorgdaily

ಗಾಂಜಾ ಮಾರಾಟ : ಇಬ್ಬರು ಆರೋಪಿಗಳ ಬಂಧನ

ಶನಿವಾರಸಂತೆ: ಪೊಲೀಸ್ ಠಾಣಾ ವ್ಯಾಪ್ತಿಯ ಊರುಗುತ್ತಿ ಗ್ರಾಮದಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿ ಕಾರ್ಯಾಚರಣೆ ನಡೆಸಲಾಗಿ ಕಾರ್ಯಾಚರಣೆಯಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಿ, ಅವರ ವಶದಲ್ಲಿದ್ದ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ. ಈ ಸಂಬಂಧ ಪ್ರಕರಣ ದಾಖಲಿಸಿ, ಕಾನೂನು ಕ್ರಮ ಕೈಗೊಂಡು ಆರೋಪಿಗಳನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.