ಸಾಮೂಹಿಕ ವರಮಹಾಲಕ್ಷ್ಮಿ ಪೂಜೆ ಹಾಗೂ ಗಾಲಿ ಕುರ್ಚಿ ವಿತರಣೆ
ವಿರಾಜಪೇಟೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ವಿರಾಜಪೇಟೆ ತಾಲೂಕಿನ ಮೂರ್ನಾಡು ವಲಯ, ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ ಹಾಗೂ ಪ್ರಗತಿಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಮರಗೋಡು ಇವುಗಳ ಜಂಟಿ ಆಶ್ರಯದಲ್ಲಿ ಸಾಮೂಹಿಕ ವರಮಹಾಲಕ್ಷ್ಮಿ ಪೂಜೆ ಹಾಗೂ ಗಾಲಿ ಕುರ್ಚಿ ವಿತರಣೆ ಹಾಗೂ ಸಭಾ ಕಾರ್ಯಕ್ರಮವು ಮರಗೋಡಿನ ಕೃಷಿ ಪತ್ತಿನ ಸಹಕಾರ ಸಂಘದ ಸಭಾಂಗಣದಲ್ಲಿ ವಿಜೃಂಭಣೆಯಿಂದ ನೆರವೇರಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಾಮೂಹಿಕ ವರಮಹಾಲಕ್ಷ್ಮಿ ಪೂಜಾ ಸಮಿತಿಯ ಅಧ್ಯಕ್ಷರಾದ ಗೀತಾ ಕೆ.ಸಿ. ವಹಿಸಿದ್ದರು.
ಮರಗೋಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ಕಾಂಗಿರ ಎನ್. ಸತೀಶ್ ಕಾರ್ಯಕ್ರಮ ಉದ್ಘಾಟಿಸಿ, ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಸಮಾಜಮುಖಿ ಕಾರ್ಯಗಳು ನಿರಂತರವಾಗಿ ನಡೆಯಲಿ ಎಂದು ಶುಭ ಹಾರೈಸಿದರು.
ಮರಗೋಡು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ಚಿತ್ರ ಬಿ.ಪಿ. ಮಾತನಾಡಿ, ಅವರು ಜನಮಂಗಳ ಕಾರ್ಯಕ್ರಮದಡಿಯಲ್ಲಿ ಅರ್ಹ ಫಲಾನುಭವಿಗಳಿಗೆ ವೀಲ್ ಚೇರ್ ಹಾಗೂ ವಾಟರ್ ಬೆಡ್ ವಿತರಿಸಿ, ಸರಕಾರ ಮಾಡುವ ಈ ಮಟ್ಟದ ಸಮಾಜಸೇವೆಯನ್ನು ಗ್ರಾಮಾಭಿವೃದ್ಧಿ ಯೋಜನೆ ಮಾಡುತ್ತಿದೆ ಎಂದು ಪ್ರಶಂಸಿಸಿದರು.
ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಕೊಡಗು ಜಿಲ್ಲಾ ನಿರ್ದೇಶಕರಾದ ಶ್ರೀ ವಿಠ್ಠಲ ಸಾಲಿಯಾನ್ ಅವರು, ಸಾಮೂಹಿಕ ಆಚರಣೆಯ ಮಹತ್ವ, ಸುಜ್ಞಾನ ನಿಧಿ ಶಿಷ್ಯವೇತನ, ಬ್ಯಾಂಕ್ ಬಿಸಿ ಸೇವೆ ಹಾಗೂ ಸಂಸ್ಥೆಯ ಸಮುದಾಯ ಅಭಿವೃದ್ಧಿ ಕಾರ್ಯಕ್ರಮಗಳ ಕುರಿತು ಮಾಹಿತಿ ನೀಡಿದರು.
ಜನಜಾಗೃತಿ ವೇದಿಕೆ ಸದಸ್ಯ ಹಾಗೂ ಮಾಜಿ ಸೈನಿಕ ವಿ.ಎಂ. ಸುಬ್ರಮಣಿ ಮತ್ತು ಅತಿಥಿ ನಂದಕುಮಾರ್ ಪಿ.ಟಿ. ಅವರು ಸಂಸ್ಥೆಯ ಸಾಮಾಜಿಕ ಕಾರ್ಯಕ್ರಮಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ತಾಲೂಕು ಯೋಜನಾಧಿಕಾರಿ ಹರೀಶ್ ಪ್ರಾಸ್ತಾವಿಕವಾಗಿ ಮಾತನಾಡಿದರು.
ಮರಗೋಡು ಸೇವಾ ಪ್ರತಿನಿಧಿ ಲತಾ ಸಾಧನಾ ವರದಿ ಮಂಡಿಸಿದರು.
ಕಾರ್ಯಕ್ರಮದಲ್ಲಿ ಪ್ರಗತಿಬಂಧು ಒಕ್ಕೂಟದ ಅಧ್ಯಕ್ಷರಾದ ಮಮತಾ ಬಿ.ಎಂ., ವಲಯ ಮೇಲ್ವಿಚಾರಕ ಸುಜೀರ್ ಕುಲಾಲ್, ಪೂಜಾ ಸಮಿತಿ ಹಾಗೂ ಒಕ್ಕೂಟದ ಪದಾಧಿಕಾರಿಗಳು, ಮೂರ್ನಾಡು ವಲಯದ ಸೇವಾಪ್ರತಿನಿಧಿಗಳು ಮತ್ತು ಮರಗೋಡು ಒಕ್ಕೂಟದ ಸರ್ವ ಸದಸ್ಯರು ಉಪಸ್ಥಿತರಿದ್ದರು. ಬಳಿಕ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
What's Your Reaction?
Like
0
Dislike
0
Love
0
Funny
0
Angry
0
Sad
0
Wow
0
