ಸೋಮವಾರಪೇಟೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನಾ ಮೆರವಣಿಗೆ
ಸೋಮವಾರಪೇಟೆ:-ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಸೋಮವಾರಪೇಟೆಯಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ಹಾಗೂ ಸಭೆ ನಡೆಸಿದರು. ಮಾಜಿ ಸಚಿವ ಅಪ್ಪಚ್ಚು ರಂಜನ್ ನೇತೃತ್ವದಲ್ಲಿ ಪಟ್ಟಣದ ವಿವೇಕಾನಂದ ವೃತ್ತದಿಂದ ಪ್ರಮುಖ ಬೀದಿಗಳಲ್ಲಿ ಸಾಗಿದ ಮೆರವಣಿಗೆ ಜೇಸಿ ವೇದಿಕೆಯಲ್ಲಿ ಸಮಾಪನಗೊಂಡಿತು.
ಕಾರ್ಯಕ್ರಮದಲ್ಲಿ ರಾಜ್ಯದ ಮಾಜಿ ಉಪ ಮುಖ್ಯಮಂತ್ರಿ ಅಶ್ವತ್ಥನಾರಾಯಣ ಗೌಡ,ಮಾಜಿ ಸ್ಪೀಕರ್ ಕೆ.ಜಿ.ಬೋಪಯ್ಯ,ವಿಧಾನ ಪರಿಷತ್ ಮಾಜಿ ಸದಸ್ಯ ಎಸ್.ಜಿ.ಮಾದಪ್ಪ, ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಹರಪಳ್ಳಿ ರವೀಂದ್ರ, ಜಿಲ್ಲಾ ಬಿಜೆಪಿ ಅಧ್ಯಕ್ಷ ರವಿಕಾಳಪ್ಪ,ಮಂಡಲ ಅಧ್ಯಕ್ಷ ಗೌತಮ್,ಜಿಲ್ಲಾ ಮಹಿಳಾಮೋರ್ಚಾ ಅಧ್ಯಕ್ಷೆ ಅನಿತಾ,ತಾಲೂಕು ಅಧ್ಯಕ್ಷೆ ಕವಿತಾ,ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಮಹೇಶ್ ತಿಮ್ಮಯ ಸೇರಿದಂತೆ ಪಕ್ಷದ ವಿವಿಧ ಘಟಕಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.
