ಅರಣ್ಯ ಇಲಾಖೆ ಸಿಬ್ಬಂದಿಗಳಿಗೆ ಪದಕ ಪ್ರದಾನ:ಕಾರ್ಯಕ್ರಮದಲ್ಲಿ ಭಾಗವಹಿಸಿದ ಶಾಸಕ ಎ‌ಎಸ್ ಪೊನ್ನಣ್ಣ

Oct 8, 2025 - 20:14
 0  260
ಅರಣ್ಯ ಇಲಾಖೆ ಸಿಬ್ಬಂದಿಗಳಿಗೆ ಪದಕ ಪ್ರದಾನ:ಕಾರ್ಯಕ್ರಮದಲ್ಲಿ ಭಾಗವಹಿಸಿದ ಶಾಸಕ ಎ‌ಎಸ್ ಪೊನ್ನಣ್ಣ

ಬೆಂಗಳೂರು:ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಇಲಾಖೆ ಆಯೋಜಿಸಿದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಹಾಗೂ ಅರಣ್ಯ ಸಚಿವ ಈಶ್ವರ್ ಖಂಡ್ರೆ ರವರೊಂದಿಗೆ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಭಾಗವಹಿಸಿದರು.

 ಅರಣ್ಯ ಇಲಾಖೆ ಸಿಬ್ಬಂದಿಗಳಿಗೆ 2024 ನೇ ಸಾಲಿನ ಶಕ್ತಿ ಪ್ರಧಾನ ಸಮಾರಂಭ ಹಾಗೂ 71ನೇ ವನ್ಯಜೀವಿ ಸಪ್ತಾಹದ ಸಮಾರೋಪ ಸಮಾರಂಭ ಇದಾಗಿತ್ತು. ಅರಣ್ಯ ಇಲಾಖೆಯಲ್ಲಿ ಅಮೋಘ ಸೇವೆ ಸಲ್ಲಿಸಿದ ಇಲಾಖೆ ಸಿಬ್ಬಂದಿಗಳಿಗೆ ಈ ಸಂದರ್ಭದಲ್ಲಿ ಗೌರವಿಸಿ ಪದಕ ನೀಡಲಾಯಿತು. ಈ ಕಾರ್ಯಕ್ರಮದಲ್ಲಿ ಭಾರತದ ಕ್ರಿಕೆಟ್ ತಂಡದ ಮಾಜಿ ಲೆಗ್ ಸ್ಪಿನ್ನರ್ ಅನಿಲ್ ಕುಂಬ್ಳೆ, ವಿಧಾನಪರಿಷತ್ ಸದಸ್ಯರಾದ ಐವಾನ್ ಡಿಸೋಜಾ, ಮುಖ್ಯಮಂತ್ರಿಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅಂಜುಮ್ ಪರ್ವೇಜ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ, ನಾಸಿರ್ ಅಹ್ಮದ್, ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು, ಗಣ್ಯರು ಹಾಗೂ ಪ್ರಮುಖರು ಉಪಸ್ಥಿತರಿದ್ದರು.

What's Your Reaction?

Like Like 1
Dislike Dislike 0
Love Love 0
Funny Funny 0
Angry Angry 0
Sad Sad 1
Wow Wow 0