Kodagu

ಶನಿವಾರಸಂತೆ ವ್ಯಾಪ್ತಿಯ ಗ್ರಾಮ ಪಂಚಾಯಿತಿ ಅಧ್ಯಕ್ಷ-ಉಪಾಧ್ಯಕ್ಷರೊಂದಿಗೆ ಮಾಧ್ಯಮ ಸಂವಾದ

admincoorgdaily

ಶನಿವಾರಸಂತೆ : ಸ್ಥಳೀಯ ಪ್ರೆಸ್ ಕ್ಲಬ್ ಸಭಾಂಗಣದಲ್ಲಿ ಕೊಡ್ಲಿಪೇಟೆ, ಬೆಸ್ಸುರು, ಹಂಡ್ಲಿ, ಶನಿವಾರಸಂತೆ, ಆಲೂರು ಸಿದ್ದಾಪುರ,ದುಂಡಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರೊಂದಿಗೆ ಮಾಧ್ಯಮ ಸಂವಾದ ಕಾರ್ಯಕ್ರಮ ನಡೆಸಲಾಯಿತು. ಪಂಚಾಯತ್ ಗೆ ಅನುದಾನ ಕಡಿಮೆ, ಶಾಶ್ವತ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಸಮಸ್ಯೆ ಸೇರಿದಂತೆ ರಸ್ತೆ, ಕಸ ಸಮಸ್ಯೆ ಗೆ ಪರಿಹಾರ ಕಾಣಲು ಸಾಧ್ಯವಾಗುತ್ತಿಲ್ಲ ಬಡವರಿಗೆ ಮನೆ ನಿರ್ಮಾಣ ಮಾಡಲು ಸಾಧ್ಯವಾಗಿಲ್ಲ, ರಸ್ತೆ ಹದಗೆಟ್ಟಿದೆ ಸಂಬಂಧ ಪಟ್ಟವರಿಗೆ ಮನವಿ ಮಾಡಲಾಗಿದೆ ಇನ್ನಿತರ ಅಭಿವೃದ್ಧಿಗಳ ಬಗ್ಗೆ ಹಾಗೂ ಪರಿಹಾರವಗಬೇಕಾದ ಸಮಸ್ಯೆ ಬಗ್ಗೆ ಮುಕ್ತ ಸಂವಾದದಲ್ಲಿ ಪಾಲ್ಗೊಂಡ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರು ಗಳು ಹೇಳಿಕೊಂಡರು.

ಬೆಸ್ಸುರು ಗ್ರಾಮ ಪಂಚಾಯತ್ ಅಧ್ಯಕ್ಷೆ ಕಮಲಮ್ಮ, ಉಪಾಧ್ಯಕ್ಷ ಹರೀಶ್, ಸದಸ್ಯ ಜಯರಾಜ್, ಕೊಡ್ಲಿಪೇಟೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಹಾಲಿ ಸದಸ್ಯ ಚಂದ್ರ ಶೇಖರ್, ಹಂಡ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಸುಧಾ ಈರೇಶ್, ದುಂಡಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಭವಾನಿ ಗುರು, ಆಲೂರು ಸಿದ್ದಾಪುರ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಚಂದ್ರಮೋಹನ್, ಶನಿವಾರಸಂತೆ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಸರ್ದಾರ್ ಅಹಮ್ಮದ್, ಇದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶನಿವಾರಸಂತೆ ಪ್ರೆಸ್ ಕ್ಲಬ್ ಅಧ್ಯಕ್ಷ ಹರೀಶ್ ಕುಮಾರ್ ವಹಿಸಿದ್ದರು. ಈ ಸಂದರ್ಭ ಪ್ರೆಸ್ ಕ್ಲಬ್ ಕಾರ್ಯದರ್ಶಿ ಚೆರಿಯಮನೆ ಸುರೇಶ್, ನಿರ್ದೇಶಕರಾದ ಮಾಲಂಬಿ ದಿನೇಶ್, ಧರಣಿ, ಭಾಸ್ಕರ್ ಮುಳ್ಳೂರು, ಕುಮಾರ್ ಸ್ವಾಮಿ ಇತರರಿದ್ದರು.