ಕಾಣೆಯಾದ ಮಕ್ಕಳನ್ನು ಪತ್ತೆ ಹಚ್ಚುವ ಕುರಿತಂತೆ ಎಸ್.ಪಿ ನೇತೃತ್ವದಲ್ಲಿ ಸಭೆ
admincoorgdaily

ಮಡಿಕೇರಿ;ಕಾಣೆಯಾದ ಮಕ್ಕಳನ್ನು ಪತ್ತೆ ಹಚ್ಚುವ ಕುರಿತಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯಲ್ಲಿ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ ನೇತೃತ್ವದಲ್ಲಿ ಸಭೆಯನ್ನು ನಡೆಸಲಾಯಿತು. ಸಭೆಯಲ್ಲಿ ಜಿಲ್ಲಾ ಮಕ್ಕಳ ವಿಶೇಷ ಪೊಲೀಸ್ ಘಟಕ, ಮಕ್ಕಳ ರಕ್ಷಣಾ ಘಟಕ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗಳ ವಿವಿಧ ಅಧಿಕಾರಿಗಳು ಭಾಗವಹಿಸಿದ್ದರು.