ಶಾಸಕ ಡಾ.ಮಂತರ್ ಗೌಡ ನೇತೃತ್ವದಲ್ಲಿ ಕುಂದು ಕೊರತೆ ಸಭೆ

ಶಾಸಕ ಡಾ.ಮಂತರ್ ಗೌಡ ನೇತೃತ್ವದಲ್ಲಿ ಕುಂದು ಕೊರತೆ ಸಭೆ

ಕುಶಾಲನಗರ:ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಇಂದು ಶಾಸಕರ ಸಮ್ಮುಖದಲ್ಲಿ ಬ್ಲಾಕ್ ಕಾಂಗ್ರೆಸ್ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರೊಡನೆ ಸಭೆ ನಡೆಯಿತು. ಹಲವರು ತಮ್ಮ ಸಮಸ್ಯೆಗಳನ್ನು ಶಾಸಕರ ಗಮನಕ್ಕೆ ತಂದರು. ಇದೇ ಸಂದರ್ಭದಲ್ಲಿ ಮಾತನಾಡಿದ ಶಾಸಕ ಮಂತರ್ ಗೌಡ, ಸಂವಿಧಾನವನ್ನು ಗೌರವಿಸಿದ ಪಕ್ಷವೆಂದರೆ ಅದು ಕಾಂಗ್ರೆಸ್ ಪಕ್ಷ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಹಲವು ಯೋಜನೆಗಳನ್ನು ತಂದಿದ್ದು ಅವುಗಳನ್ನು ಸದುಪಯೋಗಪಡಿಸಿಕೊಳ್ಳಲು ಕರೆ ನೀಡಿದರು. ಇದೇ ಸಂದರ್ಭ ಕಾಂಗ್ರೆಸ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ ಶಶಿಧರ್, ಪರಿಶಿಷ್ಟ ಪಂಗಡದ ಜಿಲ್ಲಾಧ್ಯಕ್ಷ ಬಿ.ಎ ವಿಜಯೇಂದ್ರ, ತಾಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್, ನಗರ ಕಾಂಗ್ರೆಸ್ ಅಧ್ಯಕ್ಷ ಜೋಸೆಫ್ ವಿಕ್ಟರ್ ಸೋನ್ಸ್, ಯೋಜನಾ ಪ್ರಾಧಿಕಾರದ ಅಧ್ಯಕ್ಷ ಪ್ರಮೋದ್ ಮುತ್ತಪ್ಪ, ಪುರಸಭೆ ಸದಸ್ಯ ಶಿವಶಂಕರ್, ಕಿರಣ್ ಹೆಬ್ಬಾಲೆ, ರಂಜಾನ್, ಇರ್ಫಾನ್ ಮತ್ತಿತರರು ಹಾಜರಿದ್ದರು.