ನ.8ರಿಂದ 15ರವರೆಗೆ ಮಾನಸಿಕ ಆರೋಗ್ಯ ಜಾಗೃತಿ ಅಭಿಯಾನ
admincoorgdaily
ಮಡಿಕೇರಿ: ಮೈಂಡ್ ಆ್ಯಂಡ್ ಮ್ಯಾಟರ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನಿಮಾನ್ಸ್ ಸಹಯೋಗದೊಂದಿಗೆ ನ.೮ರಿಂದ ನ.೧೫ರವರೆಗೆ ಮಾನಸಿಕ ಆರೋಗ್ಯ ಜಾಗೃತಿ ಅಭಿಯಾನ ನಡೆಯಲಿದೆ ಎಂದು ಮೈಂಡ್ ಆ್ಯಂಡ್ ಮ್ಯಾಟರ್ ಚಾರಿಟೇಬಲ್ ಟ್ರಸ್ಟ್‌ನ ಟ್ರಸ್ಟಿ ಎಂ.ಎ.ಅಚ್ಚಯ್ಯ ತಿಳಿಸಿದರು. ಅಭಿಯಾನದ ಪ್ರಯುಕ್ತ ೪೪ ಸ್ವಯಂಸೇವಕರು ನ.೮ ಮತ್ತು ೯ರಂದು ಮಡಿಕೇರಿ ಭಾರತೀಯ ವಿದ್ಯಾಭವನದಲ್ಲಿ ನಡೆಯುವ ಕಾರ್ಯಾಗಾರದಲ್ಲಿ ತರಬೇತಿ ಪಡೆಯಲಿದ್ದಾರೆ.
ತರಬೇತಿಯ ನಂತರ ನ.೧೦ ರಿಂದ ೧೫ರವರೆಗೆ ವಿವಿಧ ಶೈಕ್ಷಣಿಕ ಸಂಸ್ಥೆಗಳಲ್ಲಿ ಕ್ರಿಯಾತ್ಮಕ ಕಾರ್ಯಾಗಾರಗಳು ನಡೆಯಲಿದೆ ಎಂದು ವಿವರಿಸಿದರು.
ಸಂಸ್ಥೆಯ ಟ್ರಸ್ಟಿ ಎಂ.ಎ.ದೀಪಿಕಾ ಮಾತನಾಡಿ, ನ.೯ರಂದು ಮಡಿಕೇರಿಯ ಭಾರತೀಯ ವಿದ್ಯಾಭವನದಲ್ಲಿ ಅಭಿಯಾನಕ್ಕೆ ಚಾಲನೆ ನೀಡಲಾಗುತ್ತದೆ. ಕಾರ್ಯಕ್ರಮದಲ್ಲಿ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್‌ಗೌಡ, ನಿಮಾನ್ಸ್ ಡಿಪಾರ್ಟ್‌ಮೆಂಟ್ ಆಫ್ ಸೈಕಿಯಾಟ್ರಿಕ್ ಸೋಶಿಯಲ್ ವರ್ಕ್ ಪ್ರಾಧ್ಯಾಪಕರಾದ ಡಾ.ಅರವಿಂದ ಇ.ರಾಜ, ರೋಟರಿಯನ್ ಅನಂತಶಯನ, ಶೀತಲ್ ಸೇರಿದಂತೆ ಇತರರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.