State News

ಸಚಿವ ಡಿ.ಸುಧಾಕರ್ ನಿಧನ

admincoorgdaily

ಸಚಿವ ಡಿ.ಸುಧಾಕರ್ ನಿಧನ

ಬೆಂಗಳೂರು, ಮೇ 10: ಯೋಜನೆ ಮತ್ತು ಸಾಂಖ್ಯಿಕ ಇಲಾಖೆಯ ಸಚಿವ ಡಿ. ಸುಧಾಕರ್ ಅವರು ರವಿವಾರ ಬೆಳಗಿನಜಾವ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಡಿಯಲ್ಲಿರುವ ಕಿಮ್ಸ್‌ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

 ಸುಧಾಕ‌ರ್ ಅವರಿಗೆ (66) ವಯಸ್ಸಾಗಿತ್ತು. ಒಂದು ತಿಂಗಳಿನಿಂದ ಅನಾರೋಗ್ಯಕ್ಕೀಡಾಗಿದ್ದ ಅವರಿಗೆ ಬೆಂಗಳೂರಿನ ಕಿಮ್ಸ್ ಆಸ್ಪತ್ರೆಯ ತುರ್ತುನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಬೆಳಗ್ಗೆ 3:15ರ ಸುಮಾರಿಗೆ ನಿಧನರಾಗಿದ್ದಾರೆ ಎಂದು ಆಸ್ಪತ್ರೆ ಮೂಲಗಳು ಪ್ರಕಟಿಸಿವೆ.

ಮೊದಲು ಮೊಣಕಾಲು ಸಂಬಂಧ ಶಸ್ತ್ರ ಚಿಕಿತ್ಸೆಗಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಸಚಿವ ಡಿ. ಸುಧಾಕರ್ ಅವರು ದಾಖಲಾಗಿದ್ದರು. ಶಸ್ತ್ರಚಿಕಿತ್ಸೆಯ ಬಳಿಕ ಅವರಿಗೆ ಶ್ವಾಸಕೋಶದ ಸೋಂಕು ಕಾಣಿಸಿಕೊಂಡಿತ್ತು. ಬಳಿಕ ಅವರನ್ನು ಮಣಿಪಾಲ್‌ ಆಸ್ಪತ್ರೆಯಿಂದ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯ ತುರ್ತುನಿಗಾ ಘಟಕದಲ್ಲಿಯೇ ಸುಧಾಕರ್ ನೀಡಲಾಗುತ್ತಿತ್ತು.