ಮೇಕೇರಿ ದರ್ಗಾಕ್ಕೆ ಸಚಿವ ಯು.ಟಿ. ಖಾದರ್ ಭೇಟಿ

Aug 17, 2026 - 11:04
 0  261
ಮೇಕೇರಿ ದರ್ಗಾಕ್ಕೆ ಸಚಿವ ಯು.ಟಿ. ಖಾದರ್ ಭೇಟಿ

ಮೇಕೇರಿ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವಕ್ಫ್, ಹಜ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಚಿವರಾದ ಡಾ. ಯು.ಟಿ. ಖಾದರ್ ಫರೀದ್ ಅವರು ನಿನ್ನೆ ರಾತ್ರಿ ಖಾಸಗಿ ಕಾರ್ಯಕ್ರಮವೊಂದಕ್ಕೆ ಆಗಮಿಸಿದ ಸಂದರ್ಭದಲ್ಲಿ ಮೇಕೇರಿ ದರ್ಗಾಕ್ಕೆ ಭೇಟಿ ನೀಡಿ, ದರ್ಗಾದಲ್ಲಿನ ವ್ಯವಸ್ಥೆ ಹಾಗೂ ಸೌಲಭ್ಯಗಳನ್ನು ಪರಿಶೀಲಿಸಿದರು.

ದರ್ಗಾಕ್ಕೆ ಆಗಮಿಸಿದ ಸಚಿವರು ಅಲ್ಲಿನ ಆಡಳಿತ ಮಂಡಳಿ ಸದಸ್ಯರು ಹಾಗೂ ಗ್ರಾಮಸ್ಥರೊಂದಿಗೆ ಮಾತುಕತೆ ನಡೆಸಿ, ದರ್ಗಾದ ವ್ಯವಸ್ಥೆಗಳ ಕುರಿತು ಮಾಹಿತಿ ಪಡೆದುಕೊಂಡರು. ಈ ಸಂದರ್ಭದಲ್ಲಿ ಸ್ಥಳೀಯರ ಸಮಸ್ಯೆಗಳು ಹಾಗೂ ಅಗತ್ಯಗಳ ಬಗ್ಗೆಯೂ ಮಾಹಿತಿ ಪಡೆದರು.

 ಸಚಿವರ ಭೇಟಿಯ ಸಂದರ್ಭದಲ್ಲಿ ಅವರ ಆಪ್ತರಾದ ಅಶ್ರಫ್ ಎಂ.ಇ., ಸೋಮವಾರಪೇಟೆ, ಮೇಕೇರಿ ಪಂಚಾಯಿತಿಯ ಮಾಜಿ ಅಧ್ಯಕ್ಷರಾದ ಹನೀಫ್, ಮಸೀದಿಯ ಆಡಳಿತ ಮಂಡಳಿ ಸದಸ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0