ವಿರಾಜಪೇಟೆ ಕ್ಷೇತ್ರದ ಕಾಂಗ್ರೆಸ್ ಅಲ್ಪಸಂಖ್ಯಾತ ‌ಕ್ರಿಶ್ಚಿಯನ್ ಮುಖಂಡರೊಂದಿಗೆ ಸಚಿವ ಜಮೀರ್ ಅಹ್ಮದ್ ಸಭೆ

ವಿರಾಜಪೇಟೆ ಕ್ಷೇತ್ರದ ಕಾಂಗ್ರೆಸ್  ಅಲ್ಪಸಂಖ್ಯಾತ ‌ಕ್ರಿಶ್ಚಿಯನ್ ಮುಖಂಡರೊಂದಿಗೆ ಸಚಿವ ಜಮೀರ್ ಅಹ್ಮದ್ ಸಭೆ

ಬೆಂಗಳೂರು:ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರ ನೇತೃತ್ವದಲ್ಲಿ, ವಿರಾಜಪೇಟೆ ಕ್ಷೇತ್ರದ ಅಲ್ಪಸಂಖ್ಯಾತ ಕ್ರಿಶ್ಚಿಯನ್ ಮುಖಂಡರು ಇಂದು ವಸತಿ ಹಾಗೂ ಅಲ್ಪಸಂಖ್ಯಾತರ ಸಚಿವರಾದ ಜಮೀರ್ ಅಹ್ಮದ್ ಖಾನ್ ರವರೊಂದಿಗೆ ಸಮಾಲೋಚಿಸಿದರು.

 ಬೆಂಗಳೂರಿನ ವಸಂತನಗರದಲ್ಲಿ ಇರುವ ಅಲ್ಪಸಂಖ್ಯಾತರ ಕಲ್ಯಾಣ ನಿರ್ದೇಶನಾಲಯದಲ್ಲಿ ಮಾನ್ಯ ವಸತಿ ಸಚಿವರ ಅದ್ಯಕ್ಷತೆಯಲ್ಲಿ ಈ ಸಭೆ ನಡೆಯಿತು. ಈ ಸಂದರ್ಭದಲ್ಲಿ ಇಲಾಖೆಯ ಅಧಿಕಾರಿಗಳು, ಕ್ರಿಶ್ಚಿಯನ್ ಸಮುದಾಯದ ಮೂಲ ಸೌಲಭ್ಯಗಳು ಹಾಗೂ ಸಮಸ್ಯೆಗಳ ಕುರಿತು ಚರ್ಚಿಸಲಾಯಿತಲ್ಲದೆ ಸಚಿವರು ಮುಖಂಡರುಗಳ ಅಹವಾಲುಗಳನ್ನು ಸ್ವೀಕರಿಸಿ ಶೀಘ್ರ ಪರಿಹರಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು. ಈ ಸಭೆಯಲ್ಲಿ ವಿರಾಜಪೇಟೆ ತಾಲೂಕಿನ ಕ್ರಿಶ್ಚಿಯನ್ ಧರ್ಮ ಗುರಗಳು, ಕಾಂಗ್ರೆಸ್ ಮುಖಂಡರುಗಳಾದ ಜೋಕಿಮ್, ಜಾನ್ಸನ್, ಬಾಬು, ರೋಬಿನ್, ಅಂಟೋನಿ ಹಾಗೂ ಪ್ರಮುಖರು ಉಪಸ್ಥಿತರಿದ್ದರು.