Kodagu

ನಾಳೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರಾದ ರಾಮಲಿಂಗಾರೆಡ್ಡಿ ಕೊಡಗು ಜಿಲ್ಲಾ ಪ್ರವಾಸ

admincoorgdaily

ನಾಳೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರಾದ ರಾಮಲಿಂಗಾರೆಡ್ಡಿ ಕೊಡಗು ಜಿಲ್ಲಾ ಪ್ರವಾಸ

ಮಡಿಕೇರಿ ಆ.27:-ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವರಾದ ರಾಮಲಿಂಗಾರೆಡ್ಡಿ ಅವರು ಆಗಸ್ಟ್, 28 ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.

 ಮಾನ್ಯ ಸಚಿವರು ಆಗಸ್ಟ್, 28 ರಂದು ಮಧ್ಯಾಹ್ನ 2 ಗಂಟೆಗೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಾನವ ಮತ್ತು ಪ್ರಾಣಿ ಸಂಘರ್ಷಗಳಿಗೆ ಸಂಬಂಧಿಸಿದಂತೆ ಜನ ಪ್ರತಿನಿಧಿಗಳು, ಸಂಘಟನೆಗಳು ಹಾಗೂ ಅರಣ್ಯ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ಕೆ.ಎಸ್.ಜಗದೀಶ ರೆಡ್ಡಿ ಅವರು ತಿಳಿಸಿದ್ದಾರೆ.