ಸೆ.22 ರಂದು (ನಾಳೆ) ಉಸ್ತುವಾರಿ ಸಚಿವರ ಕೊಡಗು ಜಿಲ್ಲಾ ಪ್ರವಾಸ

ಮಡಿಕೇರಿ:-ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು ಅವರು ಸೆಪ್ಟೆಂಬರ್, 22 ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಮಾನ್ಯ ಸಚಿವರು ಸೆಪ್ಟೆಂಬರ್, 22 ರಂದು ಸಂಜೆ 5.30 ಗಂಟೆಗೆ ನಗರದ ಪಂಪಿನ ಕೆರೆಯಲ್ಲಿ ಮಡಿಕೇರಿ ನಗರ ದಸರಾ ಸಮಿತಿ ವತಿಯಿಂದ ಆಯೋಜಿಸಿರುವ ಮಡಿಕೇರಿ ನಗರದ ಇತಿಹಾಸ ಪ್ರಸಿದ್ದ ನಾಲ್ಕು ಶಕ್ತಿ ದೇವತೆಗಳ ಕರಗಗಳ ನಗರ ಪ್ರದಕ್ಷಿಣಿ ಪ್ರಾರಂಭೋತ್ಸವದಲ್ಲಿ ಭಾಗವಹಿಸಲಿದ್ದಾರೆ. ನಂತರ ಸಂಜೆ 7 ಗಂಟೆಗೆ ಕೊಡಗು ಜಿಲ್ಲಾಡಳಿತ ಹಾಗೂ ಶ್ರೀ ಕಾವೇರಿ ದಸರಾ ಸಮಿತಿ ಗೋಣಿಕೊಪ್ಪ ಇವರು ಆಯೋಜಿಸಿರುವ 47ನೇ ವರ್ಷದ ಗೋಣಿಕೊಪ್ಪ ದಸರಾ ಜನೋತ್ಸವ 2025 ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ವೀರಭದ್ರ ಹಂಚಿನಾಳ ಅವರು ತಿಳಿಸಿದ್ದಾರೆ.