ಕರ್ನೂಲ್ ಬಸ್ ದುರಂತದಲ್ಲಿ ಬೆಂಗಳೂರಿನಲ್ಲಿ ಮಾರಾಟಕ್ಕೆ ತಂದಿದ್ದ ಲಕ್ಷಾಂತರ ಮೌಲ್ಯದ ಮೊಬೈಲ್‌ಗಳೂ ಭಸ್ಮ
ಕರ್ನೂಲ್, ಅ. 24: ಹೈದರಾಬಾದ್‌ನಿಂದ ಬೆಂಗಳೂರಿಗೆ ಹೊರಟಿದ್ದ ಕಾವೇರಿ ಟ್ರಾವೆಲ್ಸ್‌ನ ವೋಲ್ವೋ ಬಸ್ ಭೀಕರ ಅಪಘಾತಕ್ಕೊಳಗಾಗಿ ಬೆಂಕಿಗಾಹುತಿಯಾದ ಘಟನೆಯಲ್ಲಿ ಬೆಂಗಳೂರಿನಲ್ಲಿ ಮಾರಾಟಕ್ಕೆ ತರುತ್ತಿದ್ದ ಮೊಬೈಲ್ ಫೋನ್ ಗಳು ಬೆಂಕಿಯಲ್ಲಿ ಭಸ್ಮವಾಗಿದೆ.
ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಚಿನ್ನಾಟೇಕೂರ್ ಸಮೀಪದ ರಾಷ್ಟ್ರೀಯ ಹೆದ್ದಾರಿ-44 ರಲ್ಲಿ ಶುಕ್ರವಾರ ಬೆಳಗಿನ ಜಾವ ಈ ದುರಂತ ಸಂಭವಿಸಿತು. ಬಸ್ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹತ್ತಿಕೊಂಡು ಕ್ಷಣಾರ್ಧದಲ್ಲಿ ಬಸ್ ಬೆಂಕಿಗಾಹುತಿಯಾದದ್ದು ದುರಂತಕ್ಕೆ ಕಾರಣವಾಗಿದೆ.
ಬಸ್‌ನಲ್ಲಿ ಬೆಂಗಳೂರಿನಲ್ಲಿ ಮಾರಾಟಕ್ಕಾಗಿ ತರಲಾಗಿದ್ದ ರಾಶಿ ರಾಶಿ ಮೊಬೈಲ್ ಫೋನ್‌ಗಳು ಸಹ ಸಾಗಿಸಲಾಗುತ್ತಿದ್ದು, ಅವುಗಳು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿವೆ. ಇದರಿಂದ ಲಕ್ಷಾಂತರ ರೂಪಾಯಿ ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ.