ಕರಾಟೆಯಲ್ಲಿ ಕೂಡಿಗೆ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿನಿ ಎಸ್.ಎಂ ಪ್ರೇಕ್ಷಿತ ರಾಜ್ಯ ಮಟ್ಟಕ್ಕೆ ಆಯ್ಕೆ

ಕುಶಾಲನಗರ:ತಾಲೂಕಿನ ಕೂಡಿಗೆ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿನಿಯಾದ ಎಸ್ ಎಂ ಪ್ರೇಕ್ಷಿತ ಜಿಲ್ಲಾ ಮಟ್ಟದ ಕರಾಟೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದು ದಾವಣಗೆರೆಯಲ್ಲಿ ನಡೆಯುವ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ತರಬೇತುದಾರರಾದ ಸಂಕೇತ್ ರವರು ವಿದ್ಯಾರ್ಥಿಗೆ ತರಬೇತಿ ನೀಡಿದ್ದಾರೆ.ವಿದ್ಯಾರ್ಥಿನಿ ಆಯ್ಕೆಯಾಗಿರುವುದಕ್ಕೆ ಸಂತೋಷ ವ್ಯಕ್ತಪಡಿಸಿದ್ದಾರೆ. ಶಾಲಾ ಪ್ರಾಂಶುಪಾಲೆ ಕೆ ಭಾರತಿ ಹಾಗೂ ಶಿಕ್ಷಕ ವೃಂದ ಹಾಗೂ ಪೋಷಕರು ಅಭಿನಂದಿಸಿದ್ದಾರೆ.