ಪೆರಾಜೆ ಗ್ರಾಮಕ್ಕೆ 19ಕೋಟಿಗೂ ಅಧಿಕ ಅನುದಾನ:ಶಾಸಕ ಎಎಸ್ ಪೊನ್ನಣ್ಣ
admincoorgdaily

ಮಡಿಕೇರಿ:ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಮಡಿಕೇರಿ ತಾಲೂಕಿನ, ಪೆರಾಜೆ ಗ್ರಾಮಕ್ಕೆ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ರವರು ಭೇಟಿ ನೀಡಿದರು. ವಿವಿಧ ಅಭಿವೃದ್ಧಿ ಕಾಮಗಾರಿಗಳ ಲೋಕಾರ್ಪಣೆ ಹಾಗೂ ನೂತನ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಶಾಸಕರು, ಸರಕಾರ ವತಿಯಿಂದ ಈಗಾಗಲೇ ತಮ್ಮ ಅವಧಿಯಲ್ಲಿ ಪೆರಾಜೆ ಗ್ರಾಮಕ್ಕೆ ಸುಮಾರು ₹ 19 ಕೋಟಿಗೂ ಅಧಿಕ ಅನುದಾನ ಅಭಿವೃದ್ಧಿ ಕಾಮಗಾರಿಗಾಗಿ ನೀಡಲಾಗಿದೆ ಎಂದು ಹೇಳಿದರು.