ತೀರ್ಥರೂಪಿಣಿಯಾಗಿ ದರ್ಶನ ನೀಡಿದ ಮಾತೆ ಕಾವೇರಿ
ಮಡಿಕೇರಿ:ತಲಕಾವೇರಿ ದೇವಾಲಯದಲ್ಲಿ ಮಧ್ಯಾಹ್ನ 1.44 ನಿಮಿಷಕ್ಕೆ ಮಕರ ಲಗ್ನದಲ್ಲಿ ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ ಜರುಗಿತು. ಭಕ್ತರ ಜೈ ಜೈ ಮಾತಾ ಕಾವೇರಿ ಮಾತಾ ಘೋಷ ವಾಕ್ಯದ ನಡುವೆ, ಅರ್ಚಕ ವೃಂದದವರ ವೇದ ಪಟ್ಟಣ, ಮಂಗಳಾರತಿ ನಡೆಯುತ್ತಿದ್ದಂತೆ ತೀರ್ಥರೂಪಿಣಿಯಾದ ಮಾತೆ ಕಾವೇರಿ ಜಲ ರೂಪದಲ್ಲಿ ಭಕ್ತರಿಗೆ ದರ್ಶನವನ್ನು ನೀಡಿದಳು.
ಅಸಂಖ್ಯಾ ಭಕ್ತಾದಿಗಳು ಭಾವುಕರಾಗಿ ಈ ಅವಿಸ್ಮರಣೀಯ ಕ್ಷಣವನ್ನು ಕಣ್ತುಂಬಿಸಿಕೊಂಡರು. ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ.ಎಸ್.ಪೊನ್ನಣ್ಣ, ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, , ಶಾಸಕರಾದ ಡಾ.ಮಂತರ್ ಗೌಡ, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಡಾ.ಧನಂಜಯ ಸರ್ಜಿ, ಕರ್ನಾಟಕ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷರಾದ ಸಿ.ಎಚ್.ಅರುಣ್ ಮಾಚಯ್ಯ, ಭಾಗಮಂಡಲ ಗ್ರಾ.ಪಂ.ಅಧ್ಯಕ್ಷರಾದ ಕಾಳನ ರವಿ, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷರಾದ ಧರ್ಮಜ ಉತ್ತಪ್ಪ, ತಾಲ್ಲೂಕು ಅಧ್ಯಕ್ಷರಾದ ಎಂ.ಜಿ.ಮೋಹನ್ ದಾಸ್, ಕೊಡವ ಅರೆ ಭಾಷೆ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರು ಸೇರಿದಂತೆ ಇತರ ಗಣ್ಯರು ಪಾಲ್ಗೊಂಡಿದ್ದರು.
ಕೊಡಗು ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ ಹಾಗೂ ಕೊಡಗು ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ, ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ, ತಹಶೀಲ್ದಾರ್ ಶ್ರೀಧರ, ಶ್ರೀಭಗಂಡೇಶ್ವರ-ತಲಕಾವೇರಿ ದೇವಾಲಯದ ಪ್ರಭಾರ ಕಾರ್ಯನಿರ್ವಾಹಕ ಅಧಿಕಾರಿ ಎನ್.ಜಿ.ಚಂದ್ರಶೇಖರ್, ಭಗಂಡೇಶ್ವರ ದೇವಾಲಯದ ತಕ್ಕ ಮುಖ್ಯಸ್ಥರಾದ ಬಳ್ಳಡ್ಕ ಸಿ.ಅಪ್ಪಾಜಿ, ತಲಕಾವೇರಿ ದೇವಾಲಯದ ತಕ್ಕ ಮುಖ್ಯಸ್ಥರಾದ ಕೋಡಿ.ಯು. ಮೋಟಯ್ಯ ಇತರರು ಈ ಸಂದರ್ಭ ಉಪಸ್ಥಿತರಿದ್ದರು.