National News

ಆಗಷ್ಟೇ ಹುಟ್ಟಿದ ಶಿಶುವನ್ನು ಆಸ್ಪತ್ರೆಯ ಕಸದ ತೊಟ್ಟಿಗೆ ಎಸೆದ ತಾಯಿ!

admincoorgdaily

ಆಗಷ್ಟೇ ಹುಟ್ಟಿದ ಶಿಶುವನ್ನು ಆಸ್ಪತ್ರೆಯ ಕಸದ ತೊಟ್ಟಿಗೆ ಎಸೆದ ತಾಯಿ!

ಚೆನ್ನೈ, ಜ. 5: ತಮಿಳುನಾಡಿನ ಪಟ್ಟಣದ ಖಾಸಗಿ ಆಸ್ಪತ್ರೆಯಲ್ಲಿ ಹೆರಿಗೆಯಾದ ಕೆಲವೇ ಗಂಟೆಗಳಲ್ಲಿ ನವಜಾತ ಶಿಶುವನ್ನು ಕಸದ ತೊಟ್ಟಿಗೆ ಎಸೆದ ಆಘಾತಕಾರಿ ಪ್ರಕರಣ ಬೆಳಕಿಗೆ ಬಂದಿದೆ. ಈ ಸಂಬಂಧ ಯುವತಿ ಹಾಗೂ ಆಕೆಯ ನಿಶ್ಚಿತಾರ್ಥ ಮಾಡಿಕೊಂಡ ಯುವಕನನ್ನು ಪೊಲೀಸರು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ.

ಪೊಲೀಸರ ಪ್ರಕಾರ, ಯ ತಿರುಚೆಂಡೂರಿನ ಖಾಸಗಿ ಆಸ್ಪತ್ರೆಗೆ ಯುವತಿ ಹೆರಿಗೆಗಾಗಿ ದಾಖಲಾಗಿದ್ದಳು. ಆಸ್ಪತ್ರೆಯಲ್ಲಿ ಶಿಶುವಿಗೆ ಜನ್ಮ ನೀಡಿದ ಬಳಿಕ, ಮದುವೆಗೆ ಮುನ್ನ ಗರ್ಭಿಣಿಯಾಗಿರುವ ವಿಚಾರ ಕುಟುಂಬದವರಿಗೆ ತಿಳಿಯುವ ಭಯದಿಂದ, ಯುವತಿ ಹಾಗೂ ಆಕೆಯ ನಿಶ್ಚಿತಾರ್ಥದ ಯುವಕ ಸೇರಿ ಶಿಶುವನ್ನು ಯಾರಿಗೂ ತಿಳಿಯದಂತೆ ಆಸ್ಪತ್ರೆಯ ಕಸದ ತೊಟ್ಟಿಗೆ ಎಸೆದಿದ್ದಾರೆ ಎನ್ನಲಾಗಿದೆ.

ಆಸ್ಪತ್ರೆ ಸಿಬ್ಬಂದಿಗೆ ಅನುಮಾನ ಉಂಟಾಗಿ ಕಸದ ತೊಟ್ಟಿಯನ್ನು ಪರಿಶೀಲಿಸಿದಾಗ, ಜೀವಂತ ಶಿಶು ಪತ್ತೆಯಾಗಿದೆ. ತಕ್ಷಣವೇ ಶಿಶುವನ್ನು ರಕ್ಷಿಸಿ ಚಿಕಿತ್ಸೆ ನೀಡಲಾಗಿದ್ದು, ಶಿಶುವಿನ ಆರೋಗ್ಯ ಸ್ಥಿತಿ ಸದ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆ ಆಡಳಿತ ಮಂಡಳಿ ತಿಳಿಸಿದೆ.

ಈ ಘಟನೆಗೆ ಸಂಬಂಧಿಸಿದಂತೆ ತಿರುಚೆಂಡೂರು ತಾಲ್ಲೂಕು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಂಡು ಮುಂದಿನ ತನಿಖೆ ಮುಂದುವರಿಸಿದ್ದಾರೆ.