ಮುಕ್ಕೋಡ್ಲು ಆಸ್ತಿ ಹಾನಿ ಪ್ರಕರಣ:ಅಧಿಕಾರಿಗಳನ್ನು ವಜಾಗೊಳಿಸಲು ಒತ್ತಾಯಿಸಿ ಸೆಪ್ಟಂಬರ್ 26ರಂದು ಮಡಿಕೇರಿಯಲ್ಲಿ ಅರಣ್ಯಭವನಕ್ಕೆ ಮುತ್ತಿಗೆ

ಮುಕ್ಕೋಡ್ಲು ಆಸ್ತಿ ಹಾನಿ ಪ್ರಕರಣ:ಅಧಿಕಾರಿಗಳನ್ನು ವಜಾಗೊಳಿಸಲು ಒತ್ತಾಯಿಸಿ ಸೆಪ್ಟಂಬರ್ 26ರಂದು ಮಡಿಕೇರಿಯಲ್ಲಿ ಅರಣ್ಯಭವನಕ್ಕೆ ಮುತ್ತಿಗೆ

ಸೋಮವಾರಪೇಟೆ:-ಮುಕ್ಕೋಡ್ಲು ಆಸ್ತಿ ಹಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳನ್ನು ವಜಾಗೊಳಿಸಲು ಒತ್ತಾಯಿಸಿ ಸೆಪ್ಟಂಬರ್ 26ರಂದು ಮಡಿಕೇರಿಯಲ್ಲಿರುವ ಅರಣ್ಯಭವನಕ್ಕೆ ಮುತ್ತಿಗೆ ಹಾಕುವುದಾಗಿ ರೈತಹೋರಾಟ ಸಮಿತಿ ಅಧ್ಯಕ್ಷ ಸುರೇಶ್ ತಿಳಿಸಿದ್ದಾರೆ.

 ಇಲ್ಲಿನ ಪತ್ರಿಕಾ ಭವನದಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಇತ್ತೀಚೆಗೆ ಮುಕೊಡ್ಲು ಗ್ರಾಮದ ಕಾಳಚಂಡ ನಾಣಿಯಪ್ಪ ಎಂಬುವರ ಜಮೀನಿಗೆ ಅರಣ್ಯ ಇಲಾಖೆ ಅಧಿಕಾರಿಗಳು ಅಕ್ರಮ ಪ್ರವೇಶ ಮಾಡಿ ಕಾಫಿ, ಎಲಕಿ ಗಿಡಗಳನ್ನು ಕಡಿದು ಸಂಪೂರ್ಣ ತೋಟವನ್ನು ನಾಶಪಡಿಸಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಸಂಬಂಧ ಪಟ್ಟ ಅಧಿಕಾರಿಗಳನ್ನು ಸೇವೆಯಿಂದ ವಜಾಗೊಳಿಸಬೇಕು ಹಾಗೂ ಸಂತ್ರಸ್ತರಿಗೆ 30 ಲಕ್ಷ ಪರಿಹಾರ ಕೊಡಬೇಕೆಂದು ಬೇಡಿಕೆ ಇಟ್ಟಿದ್ದೆವು ಆದರೆ ಇಲಾಖೆ ಇದಕ್ಕೆ ಸ್ಪಂದಿಸಿಲ್ಲವೆಂದು ಅಸಮಾಧಾನ ವ್ಯಕ್ತಪಡಿಸಿದರು.

ಅರಣ್ಯ ಇಲಾಖೆಯ ಈ ಧೋರಣೆಯನ್ನು ವಿರೋದಿಸಿ ಸೆಪ್ಟಂಬರ್ 26 ರಂದು ಮಡಿಕೇರಿಯ ಅರಣ್ಯಭವನಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸುವುದಾಗಿ ತಿಳಿಸಿದ ಅವರು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಒಕ್ಕಲಿಗರ ಸಮುದಾಯ ಭವನದಲ್ಲಿ ಪೂರ್ವಭಾವಿ ಸಭೆ ನಡೆಸಲಾಗಿದ್ದು ವಿವಿಧ ಗ್ರಾಮಸಮಿತಿಯ ಪದಾಧಿಕಾರಿಗಳು ಪಾಲ್ಗೊಂಡು ಪ್ರತಿಭಟನೆಗೆ ಬೆಂಬಲ ಸೂಚಿದ್ದಾರೆಂದರು. ಸುದ್ದಿಗೋಷ್ಠಿಯಲ್ಲಿ ರೈತ ಹೋರಾಟ ಸಮಿತಿಯ ಕಾರ್ಯದರ್ಶಿ ಹೆಚ್.ಎಸ್. ದಿವಾಕರ್, ಸಮಿತಿಯ ಮಾದಾಪುರ ಹೋಬಳಿ ಅಧ್ಯಕ್ಷ ನಾಗಂಡ ಭವಿನ್, ಸಂಘಟನಾ ಕಾರ್ಯದರ್ಶಿ ಮಿಥುನ್ ಹರಗ, ಸದಸ್ಯರ ಜಿತೇಂದ್ರ ಕುಮಾರ್ ಉಪಸ್ಥಿತರಿದ್ದರು.