ಮೂರ್ನಾಡು ವಲಯ ಮಟ್ಟದ ಪ್ರತಿಭಾ ಕಾರಂಜಿ:ರಾಫೆಲ್ಸ್ ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳು ತಾಲ್ಲೂಕು ಮಟ್ಟಕ್ಕೆ ಆಯ್ಕೆ
ಮಡಿಕೇರಿ:ಮೂರ್ನಾಡಿನ ಜ್ಞಾನಜ್ಯೋತಿ ವಿದ್ಯಾಸಂಸ್ಥೆಯಲ್ಲಿ ನಡೆದ ಮೂರ್ನಾಡು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ನಾಪೋಕ್ಲು ಸಮೀಪದ ಹೊದವಾಡದ ರಾಫೆಲ್ಸ್ ಇಂಟರ್ನ್ಯಾಷನಲ್ ಇಂಗ್ಲಿಷ್ ಸ್ಕೂಲ್ ಮತ್ತು ಪಿಯು ಕಾಲೇಜು,ಮಕ್ಕಳು ಭಾಗವಹಿಸಿ 11 ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನವನ್ನು 3 ಸ್ಪರ್ಧೆಗಳಲ್ಲಿ ದ್ವಿತೀಯ ಸ್ಥಾನವನ್ನು ಹಾಗೂ 9 ಸ್ಪರ್ಧೆಗಳಲ್ಲಿ ತೃತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ ಎಂದು ಶಾಲಾ ಆಡಳಿತ ಮಂಡಳಿ ತಿಳಿಸಿದ್ದಾರೆ.
