ಪಡಿಯಾಣಿ ಜುಮಾ ಮಸೀದಿಯಲ್ಲಿ ಮುಸಲ್ಮಾನ ಬಾಂಧವರಿಂದ ಸಂಭ್ರಮದ ಈದುಲ್ ಫಿತರ್ ಹಬ್ಬಾಚರಣೆ
admincoorgdaily

ವರದಿ:ಝಕರಿಯ ನಾಪೋಕ್ಲು
ನಾಪೋಕ್ಲು : ನಾಪೋಕ್ಲು ಬಳಿಯ ಎಮ್ಮೆಮ್ಮಾಡು ಪಡಿಯಾಣಿ ಗ್ರಾಮದ ಬದ್ರಿಯಾ ಜುಮಾ ಮಸೀದಿಯಲ್ಲಿ ಮುಸಲ್ಮಾನ ಭಾಂದವರು ಈದುಲ್ ಫಿತರ್ ಹಬ್ಬವನ್ನು ಸಂಭ್ರಮದಿಂದ ಆಚರಿಸಿದರು.
ಮಸೀದಿಯ ಖತೀಬರಾದ ಹಂಝ ರಹ್ಮಾನಿ ಅವರ ನೇತೃತ್ವದಲ್ಲಿ ಸಾಮೂಹಿಕ ಈದ್ ನಮಾಜ್ ನೆರವೇರಿಸಲಾಯಿತು. ಪವಿತ್ರ ಬಕ್ರೀದ್ ಹಬ್ಬವು ಪರಸ್ಪರ ಶಾಂತಿ,ಸೌಹಾರ್ದತೆ, ಸಹಬಾಳ್ವೆಯನ್ನು ಸಾರುವ ಹಬ್ಬವಾಗಿದೆ. ಸಮಾಜದಲ್ಲಿ ಎಲ್ಲರೂ ವರ್ಣಭೇದವಿಲ್ಲದೆ ಐಕ್ಯತೆಯಿಂದ ಜೀವನ ಸಾಧಿಸಬೇಕೆಂದು ಈದ್ ಸಂದೇಶ ಸಾರಿದರು.
ಬಳಿಕ ನಾಡಿನಿಂದ ಮೃತಪಟ್ಟವರ ಖಬರ್ ಸ್ಥಾನಕ್ಕೆ ತೆರಳಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಬಳಿಕ ಸಿಹಿ ಹಂಚಿ ಪರಸ್ಪರ ಹಬ್ಬದ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡು ಸಂಭ್ರಮದಿಂದ ಹಬ್ಬವನ್ನು ಆಚರಿಸಿದರು. ಈ ಸಂದರ್ಭ ಜಮಾಅತ್ ಅಧ್ಯಕ್ಷರಾದ ಇಬ್ರಾಹಿಂ ಮುಸ್ಲಿಯಾರ್, ಕಾರ್ಯದರ್ಶಿ ಅಬ್ದುಲ್ ಅಝೀಝ್, ಆಡಳಿತ ಮಂಡಳಿ ಪದಾಧಿಕಾರಿಗಳು, ಜಮಾಅತ್ ನ ಸರ್ವ ಸದಸ್ಯರು ಪಾಲ್ಗೊಂಡಿದ್ದರು.