Kodagu

ಹಳೇ ತಾಲೂಕು ಬದ್ರಿಯಾ ಜುಮಾ ಮಸೀದಿಯಲ್ಲಿ ಮುಸಲ್ಮಾನ ಬಾಂಧವರಿಂದ ರಂಝಾನ್ ಹಬ್ಬಾಚರಣೆ

admincoorgdaily

ಹಳೇ ತಾಲೂಕು ಬದ್ರಿಯಾ ಜುಮಾ ಮಸೀದಿಯಲ್ಲಿ ಮುಸಲ್ಮಾನ ಬಾಂಧವರಿಂದ ರಂಝಾನ್ ಹಬ್ಬಾಚರಣೆ

ವರದಿ:ಝಕರಿಯ ನಾಪೋಕ್ಲು

ನಾಪೋಕ್ಲು : ನಾಪೋಕ್ಲು ಬಳಿಯ ಹಳೇ ತಾಲೂಕಿನ ಬದ್ರಿಯಾ ಜುಮಾ ಮಸೀದಿಯಲ್ಲಿ ಮುಸಲ್ಮಾನ ಭಾಂದವರು ಪವಿತ್ರ ಈದುಲ್ ಫಿತರ್ ಹಬ್ಬವನ್ನು ಸಂಭ್ರಮ ಶ್ರದ್ಧಾ ಭಕ್ತಿಯಿಂದ ಆಚರಿಸಿದರು.

 ಹಳೇ ತಾಲೂಕು ಬದ್ರಿಯಾ ಜುಮಾ ಮಸೀದಿಯ ಖತೀಬರಾದ ಖಾಲಿದ್ ಹಿಮಮಿ ಅವರ ನೇತೃತ್ವದಲ್ಲಿ ಸಾಮೂಹಿಕ ಈದ್ ನಮಾಜ್ ನೆರವೇರಿಸಲಾಯಿತು. ಬಳಿಕ ನಾಡಿನಿಂದ ಮೃತಪಟ್ಟವರ ಖಬರ್ ಸ್ಥಾನಕ್ಕೆ ತೆರಳಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಬಳಿಕ ಪರಸ್ಪರ ಹಬ್ಬದ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡು ಸಂಭ್ರಮದಿಂದ ಹಬ್ಬವನ್ನು ಆಚರಿಸಿದರು.

ಈ ಸಂದರ್ಭ ಜಮಾಅತ್ ಅಧ್ಯಕ್ಷರಾದ ಟಿ. ಎ. ಮಹಮ್ಮದ್, ಕಾರ್ಯದರ್ಶಿ ಅಬ್ದುಲ್ ಖಾದರ್,ಮದರಸ ಅಧ್ಯಾಪಕರು ಸೇರಿದಂತೆ ಮಸೀದಿಯ ಆಡಳಿತ ಮಂಡಳಿ ಪದಾಧಿಕಾರಿಗಳು,ಬದ್ರಿಯಾ ಮಸೀದಿಯ ಸರ್ವ ಸದಸ್ಯರು ಪಾಲ್ಗೊಂಡಿದ್ದರು.