ಮೈಸೂರು ವಿಭಾಗ ಮಟ್ಟದ ಫುಟ್ಬಾಲ್: ಕೊಡಗು ಬಾಲಕಿಯರ ತಂಡ ಎರಡು ವಿಭಾಗದಲ್ಲಿ ಚಾಂಪಿಯನ್

ಮೈಸೂರು ವಿಭಾಗ ಮಟ್ಟದ ಫುಟ್ಬಾಲ್: ಕೊಡಗು ಬಾಲಕಿಯರ ತಂಡ ಎರಡು ವಿಭಾಗದಲ್ಲಿ ಚಾಂಪಿಯನ್

ಮಡಿಕೇರಿ: ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್,ಉಪನಿರ್ದೇಶಕರ ಕಛೇರಿ,ಶಾಲಾ ಶಿಲಾ ಶಿಕ್ಷಣ ಇಲಾಖೆ ಕೊಡಗು ಜಿಲ್ಲೆ,ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ವಿರಾಜಪೇಟೆ ತಾಲ್ಲೂಕು ಹಾಗೂ ಜಿಲ್ಲಾ ಫುಟ್ಬಾಲ್ ಅಸೋಸಿಯೇಷನ್, ಮಿಲನ್ಸ್ ಫುಟ್ಬಾಲ್ ಕ್ಲಬ್ ಅಮ್ಮತ್ತಿ ಇವರ ಸಹಯೋಗದೊಂದಿಗೆ ಅಮ್ಮತ್ತಿಯ ಪ್ರೌಢಶಾಲಾ ಶಾಲಾ ಮೈದಾನದಲ್ಲಿ ಮೈಸೂರು ವಿಭಾಗ ಮಟ್ಟ ಮತ್ತು ರಾಜ್ಯ ಮಟ್ಟದ 14 ಮತ್ತು 17 ವರ್ಷ ವಯೋಮಾನದ ಬಾಲಕ,ಬಾಲಕಿಯರ ಫುಟ್ಬಾಲ್ ಪಂದ್ಯಾವಳಿಗೆ ವರ್ಣರಂಜಿತ ತೆರೆ ಬಿದ್ದಿದೆ. 17 ವರ್ಷ ವಯೋಮಾನದ ಬಾಲಕಿಯರ ಪಂದ್ಯದಲ್ಲಿ ಕೊಡಗು ತಂಡವು ಚಾಂಪಿಯನ್ ಪ್ರಶಸ್ತಿ ಅಲಂಕರಿಸಿದೆ.

ಜಿದ್ದಾಜಿದ್ದಿನ ಫೈನಲ್ ಪಂದ್ಯದಲ್ಲಿ ದಕ್ಷಿಣ ಕನ್ನಡ ತಂಡವನ್ನು 1-0 ಗೋಲುಗಳ ಅಂತರದಿಂದ ಮಣಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದೆ. 14 ವರ್ಷ ವಯೋಮಾನದ ಬಾಲಕಿಯರ ಪಂದ್ಯದಲ್ಲಿ ಕೊಡಗು ತಂಡವು ದಕ್ಷಿಣ ಕನ್ನಡ ಜಿಲ್ಲಾ ತಂಡವನ್ನು ಮಣಿಸಿ ಚಾಂಪಿಯನ್ ಪ್ರಶಸ್ತಿ ಅಲಂಕರಿಸಿದೆ. 17 ವರ್ಷ ವಯೋಮಾನದ ಬಾಲಕರ ಫೈನಲ್ ಪಂದ್ಯದಲ್ಲಿ ಕೊಡಗು ಮತ್ತು ದಕ್ಷಿಣ ಕನ್ನಡ ತಂಡಗಳ ನಡುವಿನ ಜಿದ್ದಾಜಿದ್ದಿನ ಸೆಣಸಾಟದಲ್ಲಿ ನಿಗದಿತ ಸಮಯದಲ್ಲಿ ಎರಡು ತಂಡಗಳು ಗೋಲು ದಾಖಲಿಸಲಿಲ್ಲ.ಅಂತಿಮವಾಗಿ ಪೆನಾಲ್ಟಿ ಶೂಟೌಟ್ ನಲ್ಲಿ ದಕ್ಷಿಣ ಕನ್ನಡ ಜಿಲ್ಲಾ ತಂಡ ಗೆಲುವು ಸಾಧಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದೆ. 14 ವರ್ಷ ವಯೋಮಾನದ ಬಾಲಕರ ಫೈನಲ್ ಪಂದ್ಯದಲ್ಲಿ ಚಿಕ್ಕಮಗಳೂರು ತಂಡವು 4-2 ಗೋಲುಗಳ ಅಂತರದಿಂದ ಗೆದ್ದು ಚಾಂಪಿಯನ್ ಪ್ರಶಸ್ತಿ ಪಡೆಯಿತು.