ನಾಳೆಯಿಂದ ಅಮ್ಮತ್ತಿಯಲ್ಲಿ ಮೈಸೂರು ವಿಭಾಗ ಮಟ್ಟದ 14 ಮತ್ತು 17 ವರ್ಷ ವಯೋಮಾನದ ಬಾಲಕ,ಬಾಲಕಿಯರ ಫುಟ್ಬಾಲ್ ಪಂದ್ಯಾವಳಿ : ನವೆಂಬರ್ 8 ರಿಂದ 10ರವರೆಗೆ ರಾಜ್ಯ ಮಟ್ಟದ ಪಂದ್ಯಾಟ
ಸಿದ್ದಾಪುರ: ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್,ಉಪನಿರ್ದೇಶಕರ ಕಛೇರಿ,ಶಾಲಾ ಶಿಲಾ ಶಿಕ್ಷಣ ಇಲಾಖೆ ಕೊಡಗು ಜಿಲ್ಲೆ,ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ವಿರಾಜಪೇಟೆ ತಾಲ್ಲೂಕು ಹಾಗೂ ಜಿಲ್ಲಾ ಫುಟ್ಬಾಲ್ ಅಸೋಸಿಯೇಷನ್, ಮಿಲನ್ಸ್ ಫುಟ್ಬಾಲ್ ಕ್ಲಬ್ ಅಮ್ಮತ್ತಿ ಇವರ ಸಹಯೋಗದೊಂದಿಗೆ ಅಮ್ಮತ್ತಿಯ ಪ್ರೌಢಶಾಲಾ ಶಾಲಾ ಮೈದಾನದಲ್ಲಿ ಮೈಸೂರು ವಿಭಾಗ ಮಟ್ಟ ಮತ್ತು ರಾಜ್ಯ ಮಟ್ಟದ 14 ಮತ್ತು 17 ವರ್ಷ ವಯೋಮಾನದ ಬಾಲಕ,ಬಾಲಕಿಯರ ಫುಟ್ಬಾಲ್ ಪಂದ್ಯಾವಳಿ ಇಂದಿನಿಂದ(ನ.6) ನವೆಂಬರ್ 10ರವರೆಗೆ ನಡೆಯಲಿದೆ.
