ಮೈಸೂರು | ಇಂಜಿನಿಯರಿಂಗ್ ಕಾಲೇಜು ಉಪನ್ಯಾಸಕನಿಂದ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಆರೋಪ
ಮೈಸೂರು, ನ. 17: ನಗರದ ಪ್ರತಿಷ್ಠಿತ ಇಂಜಿನಿಯರಿಂಗ್ ಕಾಲೇಜೊಂದರಲ್ಲಿ ಉಪನ್ಯಾಸಕನಿಂದಲೇ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆ ಬೆಳಕಿಗೆ ಬಂದಿದೆ. ಉತ್ತಮ ಅಂಕಗಳು ಹಾಗೂ ಉದ್ಯೋಗದ ಆಮಿಷವೊಡ್ಡಿ ಅಸಭ್ಯವಾಗಿ ವರ್ತಿಸಿದ್ದಾನೆಂದು ವಿದ್ಯಾರ್ಥಿನಿ ಪೊಲೀಸರಿಗೆ ದೂರು ನೀಡಿದ್ದಾರೆ.
ಉಪನ್ಯಾಸಕ ಭರತ್ ಭಾರ್ಗವ ಎಂಬವರು “ಮಾರ್ಕ್ಸ್ ಹೆಚ್ಚಾಗಿ ಕೊಡಿಸುತ್ತೇನೆ, ಕೆಲಸ ಕೊಡಿಸುತ್ತೇನೆ” ಎಂದು ಹೇಳುತ್ತ ವಿದ್ಯಾರ್ಥಿನಿಗೆ ಪಬ್‌ಗೆ ಬರಲು ಒತ್ತಾಯಿಸಿದ್ದಾನೆ ಎಂದು ತಿಳಿದು ಬಂದಿದೆ. ಈ ಕುರಿತು ಮಹಿಳಾ ಉಪನ್ಯಾಸಕರಿಗೆ ವಿಷಯ ತಿಳಿಸಿದ್ದ ವಿದ್ಯಾರ್ಥಿನಿಗೆ ನಂತರ ಕರೆಮಾಡಿದ ಭರತ್, ತನ್ನ ಮಾತು ಕೇಳದಿದ್ದರೆ ಪರೀಕ್ಷೆಯಲ್ಲಿ ಫೇಲ್ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ದೂರಿನಲ್ಲಿ ಹೇಳಲಾಗಿದೆ. ತನ್ನ ಖಾಸಗಿ ಅಂಗಗಳ ಬಗ್ಗೆ ಕೆಟ್ಟದಾಗಿ ಮಾತನಾಡಿರುವುದನ್ನೂ ವಿದ್ಯಾರ್ಥಿನಿ ಆರೋಪಿಸಿದ್ದಾಳೆ.
ದೂರಿನ ಆಧಾರದ ಮೇಲೆ ಜಯಲಕ್ಷ್ಮಿಪುರಂ ಪೊಲೀಸ್ ಠಾಣೆಯಲ್ಲಿ ಉಪನ್ಯಾಸಕ ಭರತ್ ಭಾರ್ಗವ ವಿರುದ್ಧ BNS ಸೆಕ್ಷನ್ 126(2), 75(2), 351(2) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
