ಮೈಸೂರು ವಿಭಾಗ ಮಟ್ಟದ ಫುಟ್ಬಾಲ್ ಪಂದ್ಯಾವಳಿ:ಕೊಡಗು 17 ವರ್ಷ ವಯೋಮಾನ ಬಾಲಕ, ಬಾಲಕಿಯರ ತಂಡ ಸೆಮಿಫೈನಲ್ ಗೆ
ಮಡಿಕೇರಿ: ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್,ಉಪನಿರ್ದೇಶಕರ ಕಛೇರಿ,ಶಾಲಾ ಶಿಲಾ ಶಿಕ್ಷಣ ಇಲಾಖೆ ಕೊಡಗು ಜಿಲ್ಲೆ,ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ವಿರಾಜಪೇಟೆ ತಾಲ್ಲೂಕು ಹಾಗೂ ಜಿಲ್ಲಾ ಫುಟ್ಬಾಲ್ ಅಸೋಸಿಯೇಷನ್, ಮಿಲನ್ಸ್ ಫುಟ್ಬಾಲ್ ಕ್ಲಬ್ ಅಮ್ಮತ್ತಿ ಇವರ ಸಹಯೋಗದೊಂದಿಗೆ ಅಮ್ಮತ್ತಿಯ ಪ್ರೌಢಶಾಲಾ ಶಾಲಾ ಮೈದಾನದಲ್ಲಿ ಮೈಸೂರು ವಿಭಾಗ ಮಟ್ಟ ಮತ್ತು ರಾಜ್ಯ ಮಟ್ಟದ 14 ಮತ್ತು 17 ವರ್ಷ ವಯೋಮಾನದ ಬಾಲಕ,ಬಾಲಕಿಯರ ಫುಟ್ಬಾಲ್ ಪಂದ್ಯಾವಳಿಗೆ ಚಾಲನೆ ದೊರತಿದೆ.
ಗುರುವಾರ 17 ವರ್ಷ ವಯೋಮಾನದ ಬಾಲಕರ ಪಂದ್ಯದಲ್ಲಿ ಉಡುಪಿ,ಮಂಡ್ಯ,ಕೊಡಗು, ತಂಡಗಳು ಸೆಮಿಫೈನಲ್ ಹಂತಕ್ಕೆ ಅರ್ಹತೆ ಪಡೆದಿದೆ. 17 ವರ್ಷ ವಯೋಮಾನದ ಬಾಲಕಿಯರ ವಿಭಾಗದಲ್ಲಿ ಕೊಡಗು ತಂಡ ಸೆಮಿಫೈನಲ್ ಹಂತಕ್ಕೆ ಅರ್ಹತೆ ಪಡೆದುಕೊಂಡಿದೆ. 14 ವರ್ಷ ವಯೋಮಾನದ ಬಾಲಕರ ವಿಭಾಗದಲ್ಲಿ ಉಡುಪಿ,ದಕ್ಷಿಣ ಕನ್ನಡ, ಚಿಕ್ಕಮಗಳೂರು ತಂಡಗಳು ಸೆಮಿಫೈನಲ್ ಹಂತಕ್ಕೆ ಅರ್ಹತೆ ಪಡೆದುಕೊಂಡಿದೆ.
